ಸೋಮವಾರಪೇಟೆ, ಅ. ೬: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಬಿ.ಸಿ.ಎಂ. ಕಚೇರಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ತಾಲೂಕಿನ ೧೯ ಹಾಸ್ಟೇಲ್‌ಗಳಲ್ಲೂ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿ.ರವಿ ತಿಳಿಸಿದರು. ಸ್ವಚ್ಛತಾ ಕಾರ್ಯದಲ್ಲಿ ಕಚೇರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.