ಮಡಿಕೇರಿ, ಅ. ೮ : ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ವ್ಯಾಪ್ತಿಯ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ವತಿಯಿಂದ ತಾ. ೯ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ರಜತ ಮಹೋತ್ಸವ (ಬೆಳ್ಳಿ ಹಬ್ಬ) ದಿನಾಚರಣೆ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಶಿವಮೊಗ್ಗ ಕೆ.ಶಿ.ನಾ.ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ಎಂ.ಹನುಮAತಪ್ಪ ಹಾಗೂ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಸಿ.ಜಿ. ಕುಶಾಲಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.