ಸೋಮವಾರಪೇಟೆ, ಅ.೮: ಸಮೀಪದ ಐಗೂರು ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮ ಸಭೆೆಯನ್ನು ತಾ. ೧೧ರಂದು ಗ್ರಾಮಪಂಚಾಯಿತಿ ಅಧ್ಯಕ್ಷರಾದ ಪಾರ್ವತಿ ಅವರ ಅಧ್ಯಕ್ಷತೆಯಲ್ಲಿ ಯಡವನಾಡು ಗ್ರಾಮದ ಸಮುದಾಯ ಭವನದಲ್ಲಿ ಪೂರ್ವಾಹ್ನ ೧೦.೩೦ ಗಂಟೆಗೆ ನಡೆಸಲಾಗುವುದು ಎಂದು ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.