ನಾಪೋಕ್ಲು: ಬಿಜೆಪಿ ಪಕ್ಷದ ವತಿಯಿಂದ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಹಳೆ ತಾಲೂಕಿನ ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೂತ್ ಸಮಿತಿಯ ಅಧ್ಯಕ್ಷ ಶಿವಚಾಳಿಯಂಡ ಕಿಶೋರ್ ಬೋಪಣ್ಣ ವಹಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅಪ್ಪಚೆಟ್ಟೊಳಂಡ ಮನು ಮುತ್ತಪ್ಪ, ಮಂಡಲ ಅಧ್ಯಕ್ಷ ಕಾಂಗೀರ ಸತೀಶ್, ಕಾರ್ಯದರ್ಶಿ ಕೋಡಿರ ಪ್ರಸನ್ನ, ಶಾಂತೆಯAಡ ರವಿ ಕುಶಾಲಪ್ಪ, ಡೀನ್ ಬೋಪಣ್ಣ, ಕರವಂಡ ಲವ ನಾಣಯ್ಯ, ಕೇಟೋಳಿರ ಹರೀಶ್ ಪೂವಯ್ಯ, ಶಿವಚಾಳಿಯಂಡ ಜಗದೀಶ್, ಹೇಮಂತ್, ಬಿದ್ದಾಟಂಡ ರಮೇಶ್ ಚಂಗಪ್ಪ, ಮನು ಮಹೇಶ್, ರಮೇಶ್ ಮುದ್ದಯ್ಯ, ದೀಪು ದೇವಯ್ಯ ಮತ್ತಿತರರು ಇದ್ದರು.ಸೋಮವಾರಪೇಟೆ: ಗ್ರಾಮ ಮಟ್ಟದಲ್ಲಿರುವ ಕಾರ್ಯಕರ್ತರ ಶ್ರಮದಿಂದಾಗಿ ಇಂದು ರಾಷ್ಟಾçದ್ಯಂತ ಬಿಜೆಪಿ ಪಕ್ಷ ಬಲಿಷ್ಠವಾಗಿ ಬೆಳೆದಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.
ಪಕ್ಷದ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆಯಂತೆ ಕ್ಷೇತ್ರದಾದ್ಯಂತ ಬಿಜೆಪಿ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮಕ್ಕೆ ದುಂಡಳ್ಳಿಯಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೋರ್ವ ಕಾರ್ಯಕರ್ತರ ತ್ಯಾಗ, ಪರಿಶ್ರಮದಿಂದ ಇಂದು ಪಕ್ಷ ಬೃಹತ್ತಾಗಿ ಬೆಳೆದಿದೆ ಎಂದರು.
ರಾಜ್ಯ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಎಲ್ಲಾ ವರ್ಗದ ಮಂದಿಗೆ ಒಂದಿಲ್ಲೊAದು ಯೋಜನೆಗಳ ಮೂಲಕ ನೆರವು ಒದಗಿಸಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸರ್ಕಾರಗಳು ಜನರ ನೆರವಿಗೆ ಬಂದಿದೆ. ದೇಶಾದ್ಯಂತ ಉಚಿತವಾಗಿ ಕೊರೊನಾ ಲಸಿಕೆ ನೀಡುವ ಮೂಲಕ ಜನಸಾಮಾನ್ಯರ ಜೀವ ಉಳಿಸಿದೆ ಎಂದು ರಂಜನ್ ಹೇಳಿದರು.
ಸರ್ಕಾರಗಳ ಜನಪರ ಯೋಜನೆಗಳ ಮಾಹಿತಿಯನ್ನು ಪ್ರತಿ ಮನೆಗೆ ತಲುಪಿಸುವ ಜವಾಬ್ದಾರಿ ಸ್ಥಳೀಯ ಕಾರ್ಯಕರ್ತರ ಮೇಲಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷ ರಾಜಕಾರಣ;ನಂತರ ಎಲ್ಲರೂ ಒಂದೇ ಎಂಬ ಭಾವನೆಯಡಿ ಬಿಜೆಪಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ನಂತರ ದುಂಡಳ್ಳಿ, ಬ್ಯಾಡಗೊಟ್ಟ, ಕೊಡ್ಲಿಪೇಟೆ, ಶನಿವಾರಸಂತೆ, ಹಂಡ್ಲಿ, ಬೆಸೂರು, ನಿಡ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಬೂತ್ ಅಧ್ಯಕ್ಷರ ಮನೆಗಳಿಗೆ ತೆರಳಿ ಶಾಸಕರು ನಾಮಫಲಕ ಅಳವಡಿಸಿದರು.
ಈ ಸಂದರ್ಭ ಪಕ್ಷದ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಯುವ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿಗಳಾದ ಮೋಕ್ಷಿಕ್, ಗೌತಮ್, ಕೃಷ್ಣಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುಬ್ರಮಣಿ ಸೇರಿದಂತೆ ಪದಾಧಿಕಾರಿಗಳು, ಪ್ರಮುಖರಾದ ಲೋಕೇಶ್ವರಿ ಗೋಪಾಲ್, ಸವಿತಾ ಸತೀಶ್, ಭುವನೇಶ್ವರಿ, ಶಕ್ತಿ ಕೇಂದ್ರದ ಅಧ್ಯಕ್ಷರುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.