ಸೋಮವಾರಪೇಟೆ, ಅ. ೮: ಸಮೀಪದ ಗಣಗೂರು ಗ್ರಾಮ ಪಂಚಾಯಿತಿಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗ್ರಾ.ಪಂ.ನಲ್ಲಿ ಕಳೆದ ೨೫ ವರ್ಷಗಳಿಂದ ಅಟೆಂಡರ್ ಆಗಿದ್ದ ಜಿ.ಸಿ. ಹಿತೇಶ್ (೪೫) ಎಂಬವರೇ ಸಾವನ್ನಪ್ಪಿದವರು. ಕಳೆದ ತಾ. ೬ರಂದು ಗಣಗೂರಿನ ತಮ್ಮ ಮನೆಯಲ್ಲಿ ವಿಷ ಸೇವನೆ ಮಾಡಿದ್ದ ಹಿತೇಶ್ ಅವರನ್ನು ತಕ್ಷಣ ಮನೆಯವರು ಹಾಗೂ ಸ್ಥಳೀಯರು ಸೋಮವಾರಪೇಟೆ ಸರ್ಕಾರಿ ಅಸ್ಪತ್ರೆಗೆ ಸಾಗಿಸಿ, ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ಆದರೆ ಅಲ್ಲೂ ಸಹ ಚಿಕಿತ್ಸೆ ಫಲಕಾರಿಯಾಗಿದೆ ನಿನ್ನೆ ಮಧ್ಯರಾತ್ರಿ ಮೃತಪಟ್ಟಿದ್ದಾರೆ. ಮೃತರು ಪತ್ನಿ ರಾಧಾ ಸೇರಿದಂತೆ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.