ಮಡಿಕೇರಿ, ಅ. ೮: ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವ ಪ್ರಯುಕ್ತ ರಾಷ್ಟಿçÃಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯಾದ್ಯಂತ ‘ಪ್ಯಾನ್ ಇಂಡಿಯಾ ಔಟ್‌ರೀಚ್’ ಕಾರ್ಯಕ್ರಮಗಳನ್ನು ನವೆಂಬರ್ ೧೪ ರವರೆಗೆ ಹಮ್ಮಿಕೊಳ್ಳಲಾಗಿದ್ದು, ಆ ದಿಸೆಯಲ್ಲಿ ಅಕ್ಟೋಬರ್ ೨ ರಿಂದ ಇದುವರೆಗೆ ಸುಮಾರು ೧೫ ಕಡೆ ವಿವಿಧ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಮಣ್ಯ ಅವರು ತಿಳಿಸಿದ್ದಾರೆ.

ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ ೧೪ ರವರೆಗೂ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್, ಹೀಗೆ ಎಲ್ಲಾ ಇಲಾಖೆಗಳ ಸಹಕಾರದಿಂದ ಜಿಲ್ಲೆಯಾದ್ಯಂತ ಗ್ರಾಮ ಮಟ್ಟದಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಿ ಕಾನೂನು ಸೇವೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಆಚರಣೆಯೊಂದಿಗೆ ಕಾರ್ಯಕ್ರಮಗಳನ್ನು ಆರಂಭಿಸಲಾಗಿದ್ದು, ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ, ಮಕ್ಕಳ ಹಕ್ಕು ಉಲ್ಲಂಘನೆಯಾಗದAತೆ ಜಾಗೃತಿ, ಕೋವಿಡ್-೧೯ ಬಗ್ಗೆ ಜಾಗೃತಿ, ಕೋವಿಡ್ ಲಸಿಕಾ ಅಭಿಯಾನ, ಮಹಿಳೆಯರು ಮತ್ತು ಮಕ್ಕಳಿಗೆ ಇರುವ ಕಾನೂನು ಮತ್ತು ನೆರವು ಹೀಗೆ ಹಲವು ರೀತಿಯ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ವಾತಂತ್ರೊö್ಯÃತ್ಸವದ ೭೫ನೇ ವರ್ಷಾಚರಣೆ ಪ್ರಯುಕ್ತ ಕಾನೂನಿನ ಸೌಲಭ್ಯಗಳು ಹಾಗೂ ಜನಸಾಮಾನ್ಯರಿಗೆ ನೆರವು ಬಗ್ಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಬುಡಕಟ್ಟು ಜನರು, ಸಂಕಷ್ಟದಲ್ಲಿರುವವರು, ಅವಕಾಶ ವಂಚಿತರನ್ನು ಗುರುತಿಸಿ, ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.