ಮಡಿಕೇರಿ, ಅ. ೭: ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಎಟಿಎAಎ) ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ೧ ಹುದ್ದೆ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ೧ ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ ೨೦೨೧-೨೨ನೇ ಸಾಲಿನ ಸೀಮಿತ ಅವಧಿಗೆ ಸೋಮವಾರಪೇಟೆ ಹಾಗೂ ಶಾಂತಳ್ಳಿ ಹೋಬಳಿಗಳಿಗೆ ಸೇರಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗೆ ವಿದ್ಯಾರ್ಹತೆ ಎಂ.ಎಸ್ಸಿ, (ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ) ಮತ್ತು ಕನಿಷ್ಟ ೨ ವರ್ಷ ಕೃಷಿ ವಿಸ್ತರಣಾ ಮತ್ತು ಸಂಬAಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್ ಆಫೀಸ್‌ನಲ್ಲಿ ಪರಿಣತಿ ಹೊಂದಿರಬೇಕು. ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಬಿ.ಎಸ್ಸಿ, ಎಂ.ಎಸ್ಸಿ (ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ) ಹಾಗೂ ಕನಿಷ್ಟ ೧ ವರ್ಷ ಕೃಷಿ ವಿಸ್ತರಣಾ ಮತ್ತು ಸಂಬAಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಆಫೀಸ್‌ನಲ್ಲಿ ಪರಿಣತಿ ಹೊಂದಿರಬೇಕು. ಗರಿಷ್ಠ ೪೫ ವರ್ಷದೊಳಗಿರಬೇಕು.
ಅರ್ಹ ಅಭ್ಯರ್ಥಿಗಳು ತಾ. ೧೩ ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರು, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.