ಸುಂಟಿಕೊಪ್ಪ, ಅ. ೮: ೭ನೇ ಹೊಸಕೋಟೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾವೇರಿ ಸ್ವಸಹಾಯ ಸಂಘದ ೧೦ನೇ ವರ್ಷದ ವಾರ್ಷಿಕೋತ್ಸವವನ್ನು ಇತ್ತೀಚೆಗೆ ಆಚರಿಸಲಾಯಿತು.

ಕಾವೇರಿ ಸ್ವಸಹಾಯ ಸಂಘದ ಸದಸ್ಯೆ ಭಾರತಿ ಅವರ ನಿವಾಸದಲ್ಲಿ ಆಯೋಜಿಸಲಾದ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ೭ನೇ ಹೊಸಕೋಟೆ ಗ್ರಾ.ಪಂ. ಅಧ್ಯಕ್ಷ ರಮೇಶ್ ಮಾತನಾಡಿ ಸಂಘಗಳಿAದ ಮಹಿಳೆಯರಿಗೆ ವೈಯಕ್ತಿಕ ಸಹಕಾರಿಯಾಗಿದೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬಡ ಕುಟುಂಬಗಳಿಗೆ, ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂಘದ ಸದಸ್ಯರಿಗೆ ಸಕಾಲದಲ್ಲಿ ಸಾಲ ನೀಡುವ ಮೂಲಕ ಅವರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಸಂಘವು ಮಾಡುತ್ತಿದೆ ಎಂದು ಕ.ರ.ವೇ. ಸುಂಟಿಕೊಪ್ಪ ಘಟಕದ ಅಧ್ಯಕ್ಷ ರವಿಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾವೇರಿ ಸ್ವಸಹಾಯ ಸಂಘದ ಅಧ್ಯಕ್ಷೆ ಬಿಂದು ವಹಿಸಿದರು.

ಸಮಾರಂಭವನ್ನು ಉದ್ದೇಶಿಸಿ ೭ನೇ ಹೊಸಕೋಟೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ನಿರ್ಮಲ ಪ್ರಕಾಶ್, ಒಕ್ಕೂಟದ ಅಧ್ಯಕ್ಷೆ ಮಂಜುಳಾ ಪ್ರಕಾಶ್ ಮಾತನಾಡಿದರು.

ಈ ಸಂದರ್ಭ ಸಂಘದ ಸದಸ್ಯರು ಗಳಾದ ಕಾವ್ಯ, ಭಾರತಿ, ಸೌಮ್ಯ, ಬಿಂದು, ಭವ್ಯ, ತುಳಸಿ, ಶಾಫಿಯ, ರಾಬಿಂiÀi, ಸುಜಾತ ಹಾಗೂ ರಮ್ಲಾ ಇದ್ದರು.