ಸೋಮವಾರಪೇಟೆ, ಅ. ೮: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ೭ ವರ್ಷಗಳು ಪೂರ್ಣಗೊಂಡಿದ್ದು, ಈ ಅವಧಿ ಯಲ್ಲಿ ಸರ್ಕಾರ ಜಾರಿಗೊಳಿಸಿದ ಜನಪರ ಯೋಜನೆಗಳ ಮಾಹಿತಿ ಯನ್ನು ಪ್ರತಿ ಮನೆಗೂ ತಲುಪಿಸುವಂತಾಗಬೇಕು ಎಂದು ರಾಜ್ಯ ಬಿಜೆಪಿ ವಕ್ತಾರೆ, ಮಹಿಳಾ ಆಯೋಗದ ಮಾಜೀ ಅಧ್ಯಕ್ಷೆ ಮಂಜುಳಾ ಹೇಳಿದರು.

ಮಂಡಲ ಬಿಜೆಪಿ ವತಿಯಿಂದ ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಸೇವಾ ಮತ್ತು ಸಮರ್ಪಣಾ ಅಭಿಯಾನದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಎಲ್ಲರಿಗೂ ತಲುಪಿಸುವ ಕಾರ್ಯ ಕಾರ್ಯಕರ್ತ ರಿಂದ ಆಗಬೇಕು. ಆಯುಷ್ಮಾನ್ ಭಾರತ್ ಯೋಜನೆಯಡಿ ಪ್ರತಿ ಕುಟುಂಬದ ಆರೋಗ್ಯ ಸೇವೆಗೆ ೫ ಲಕ್ಷ, ಕೃಷಿ ಸಮ್ಮಾನ್ ಯೋಜನೆಯಡಿ ರೂ.೧೨ ಸಾವಿರ ರೈತರ ಖಾತೆಗೆ ನೀಡುವ ಯೋಜನೆಗಳು ಚಾಲ್ತಿಯಲ್ಲಿವೆ ಎಂದರು.

ಇದರೊAದಿಗೆ ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಯಾಗುತ್ತಿದೆ. ರಾಷ್ಟಿçÃಯ ಹೆದ್ದಾರಿಗಳ ನಿರ್ಮಾಣ, ಮೂಲಭೂತ ಸೌಕರ್ಯ ಸೇರಿದಂತೆ ದೇಶದ ೮೭ ಕೋಟಿಗೂ ಅಧಿಕ ಮಂದಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗಿದೆ. ಇವುಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಿದೆ ಎಂದು ಮಂಜುಳಾ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ಮನುಕುಮಾರ್ ರೈ ವಹಿಸಿದ್ದರು. ಶಾಸಕ ಅಪ್ಪಚ್ಚುರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಜಿಲ್ಲಾ ಸಂಯೋಜಕ ಅರುಣ್ ಭೀಮಯ್ಯ, ಸಂಚಾಲಕ ಮಹೇಶ್, ಮಂಡಲ ಮಾಜಿ ಅಧ್ಯಕ್ಷ ಕೊಮಾರಪ್ಪ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಡಿ. ಕೃಷ್ಣಪ್ಪ, ಮೋಕ್ಷಿಕ್, ಲೋಕೇಶ್ವರಿ ಗೋಪಾಲ್, ಅಭಿಮನ್ಯುಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.