ಏರ್ ಇಂಡಿಯಾ ಮರು ನಿರ್ಮಾಣಕ್ಕೆ ಪ್ರಯತ್ನ

ನವದೆಹಲಿ, ಅ. ೮: ಏರ್ ಇಂಡಿಯಾ ಪಡೆಯಲು ರೂ. ೧೮,೦೦೦ ಕೋಟಿ ಮೊತ್ತದ ಟಾಟಾ ಸನ್ಸ್ ಬಿಡ್‌ನ್ನು ಭಾರತ ಸರ್ಕಾರ ಸ್ವೀಕರಿಸಿರುವುದನ್ನು ಶುಕ್ರವಾರ ಸ್ವಾಗತಿಸಿರುವ ರತನ್ ಟಾಟಾ, ಸಾಲದ ಸುಳಿಯಲ್ಲಿರುವ ಏರ್ ಇಂಡಿಯಾ ಕಂಪೆನಿ ಮರು ನಿರ್ಮಾಣಕ್ಕೆ ಗಮನಾರ್ಹ ರೀತಿಯಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ. ‘ವೆಲ್ ಕಮ್ ಬ್ಯಾಕ್ ಏರ್ ಇಂಡಿಯಾ' ಏರ್ ಇಂಡಿಯಾಗಾಗಿ ಟಾಟಾ ಗ್ರೂಪ್ ಬಿಡ್ ಪಡೆದಿರುವುದು ದೊಡ್ಡ ಸುದ್ದಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಏರ್ ಇಂಡಿಯಾ ಮರು ನಿರ್ಮಾಣಕ್ಕೆ ಗಮನಾರ್ಹ ರೀತಿಯಲ್ಲಿ ಪ್ರಯತ್ನಿಸಲಾಗುವುದು, ವಿಮಾನಯಾನ ಉದ್ಯಮದಲ್ಲಿ ಟಾಟಾ ಗ್ರೂಪ್‌ಗೆ ಇದರಿಂದ ಅತ್ಯಂತ ಪ್ರಬಲ ಮಾರುಕಟ್ಟೆ ಒದಗುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. ಇದರಿಂದಾಗಿ ಏರ್ ಇಂಡಿಯಾ ಮರಳಿ ಟಾಟಾ ತೆಕ್ಕೆಗೆ ಸೇರಿದೆ.

ರಾಜ್ಯದಲ್ಲಿ ಕೊರೊನಾ ಇಳಿಮುಖ

ಬೆಂಗಳೂರು, ಅ. ೮: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು ಕಳೆದ ೨೪ ಗಂಟೆಯಲ್ಲಿ ೩೯೭ ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೨೯,೮೦,೧೭೦ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ೫ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೭,೮೬೬ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ೧೪೦ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೨,೪೭,೯೭೦ಕ್ಕೆ ಏರಿಕೆಯಾಗಿದೆ. ನಗರದಲ್ಲಿ ೩ ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ೬೦೩ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೨೯,೩೦,೮೬೭ಕ್ಕೆ ಏರಿಕೆಯಾಗಿದೆ. ೧೧,೪೦೮ ಸಕ್ರಿಯ ಪ್ರಕರಣಗಳಿವೆ.

ಮುಖ್ಯ ಆರ್ಥಿಕ ಸಲಹೆಗಾರ ಸುಬ್ರಮಣಿಯನ್ ರಾಜೀನಾಮೆ

ನವದೆಹಲಿ, ಅ. ೮: ಹಣಕಾಸು ಸಚಿವಾಲಯದಲ್ಲಿ ಮೂರು ವರ್ಷ ಪೂರ್ಣಗೊಳಿಸಿದ ನಂತರ ತನ್ನ ಅಕಾಡೆಮಿಗೆ ಮರಳಲು ನಿರ್ಧರಿಸಿರುವುದಾಗಿ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್ ಶುಕ್ರವಾರ ಹೇಳಿದ್ದಾರೆ. ಹೈದರಾಬಾದಿನ ಐಎಸ್‌ಬಿ ಪ್ರೊಫೆಸರ್ ಆಗಿದ್ದ ಸುಬ್ರಮಣಿಯನ್ ಅವರನ್ನು ೨೦೧೮ ಡಿಸೆಂಬರ್‌ನಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೇಂದ್ರ ಸರ್ಕಾರ ನೇಮಿಸಿತ್ತು. ಅರವಿಂದ್ ಸುಬ್ರಮಣಿಯನ್ ಅವರಿಂದ ತೆರವಾದ ಸ್ಥಾನಕ್ಕೆ ಸುಬ್ರಣಿಯನ್ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸ್ಪೂರ್ತಿದಾಯಕ ನಾಯಕತ್ವ ಹಾಗೂ ಅವರ ಬೆಂಬಲಕ್ಕೆ ಧನ್ಯವಾದವನ್ನು ಸುಬ್ರಮಣಿಯನ್ ತಿಳಿಸಿದ್ದಾರೆ. ತಮ್ಮ ಮೂರು ವರ್ಷಗಳ ಅಧಿಕಾರವಧಿ ಪೂರ್ಣಗೊಂಡ ಬಳಿಕ ಮತ್ತೆ ಅಕಾಡೆಮಿಗೆ ವಾಪಸ್ಸಾಗಲು ನಿರ್ಧರಿಸಿರುವುದಾಗಿ ಅವರು ಹೇಳಿಕೆ ನೀಡಿದ್ದಾರೆ.

ಲಖಿಂಪುರ್ ಹಿಂಸಾಚಾರ ಪ್ರಕರಣ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ, ಅ. ೮: ಲಖಿಂಪುರ್ ಹಿಂಸಾಚಾರ ಪ್ರಕರಣದ ನಿರ್ವಹಣೆ ಕುರಿತಂತೆ ಅತೃಪ್ತಿ ವ್ಯಕ್ತಿಪಡಿಸಿದ ಸುಪ್ರೀಂ ಕೋರ್ಟ್ ಇಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ಟೀಕಿಸಿದ್ದು ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದರೂ ಆತನನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದೆ. ಲಖಿಂಪುರ್ ಖೇರಿ ಹಿಂಸಾಚಾರದ ಬಗ್ಗೆ ಸ್ವಯಂಪ್ರೇರಿತ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಇದು ಎಂಟು ಜನರ ಕ್ರೂರ ಹತ್ಯೆ, ಎಲ್ಲಾ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿತು. ಸಮಸ್ಯೆಯ ಸೂಕ್ಷ್ಮತೆಯಿಂದಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿತು. ಏತನ್ಮಧ್ಯೆ, ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ, ರಾಜ್ಯದ ಅತ್ಯುನ್ನತ ಪೊಲೀಸ್ ಅಧಿಕಾರಿಗೆ ಪ್ರಕರಣದ ಸಾಕ್ಷ್ಯಗಳನ್ನು ಸಂರಕ್ಷಿಸಲು ತಿಳಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಭರವಸೆ ನೀಡಿದೆ.

ಅಲ್ಪಸಂಖ್ಯಾತರ ಮೇಲೆ ದಾಳಿ; ಕಣಿವೆ ಕಾಶ್ಮೀರಿ ಪಂಡಿತರು

ಶ್ರೀನಗರ, ಅ. ೮: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಹತ್ಯೆಗೆ ಗುರಿ ಇಡಲಾಗಿದೆ ಎಂಬ ಅನುಮಾನದಿಂದ ೨೦೧೦-೧೧ರ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ಸರ್ಕಾರಿ ಕೆಲಸ ಪಡೆದಿರುವ ಸಮುದಾಯದ ಕೆಲವು ನೌಕರರು, ಸುರಕ್ಷಿತ ವಾತಾವರಣ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದು, ತಮ್ಮ ಜೀವ ಭಯದಿಂದ ನಿಧಾನವಾಗಿ ಜಮ್ಮುವನ್ನು ತೊರೆಯಲು ಆರಂಭಿಸಿದ್ದಾರೆ ಎಂದು ಕಾಶ್ಮೀರಿ ಪಂಡಿತ್ ಸಂಘಟನೆಯೊAದು ಶುಕ್ರವಾರ ಹೇಳಿದೆ. ಈ ಮಧ್ಯೆ ಆಡಳಿತಗಾರರು ಅಲ್ಪಸಂಖ್ಯಾತ ಸಮುದಾಯದ ನೌಕರರಿಗೆ ೧೦ ದಿನಗಳ ರಜೆಯನ್ನು ನೀಡಿದೆ ಎಂದು ಅಧಿಕೃತ ಮೂಲಗಳು ಹೇಳಿವೆ. ಐದು ದಿನಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಏಳು ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಈ ಏಳು ಮಂದಿಯಲ್ಲಿ ನಾಲ್ವರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ!

ಬೆಂಗಳೂರು, ಅ. ೮: ಕೆಂಪೇಗೌಡ ಅಂರ‍್ರಾಷ್ಟಿçÃಯ ವಿಮಾನ ನಿಲ್ದಾಣವೂ ಅತಿ ಹೆಚ್ಚು ಪೆರಿಷೆಬಲ್ (ಕೊಳೆಯುವ) ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ (ಎಪಿಇಡಿಎ) ನೀಡಿದ ಮಾಹಿತಿಯ ಪ್ರಕಾರ, ೨೦೨೦-೨೧ರ ಹಣಕಾಸು ವರ್ಷದಲ್ಲಿ ೪೧,೧೩೦ ಮೆಟ್ರಿಕ್ ಟನ್‌ನಷ್ಟು ಕಡಿಮೆ ಬಾಳಿಕೆ ಅವಧಿಯ ಹಣ್ಣು, ತರಕಾರಿಯಂತಹ ಕೊಳೆಯುವ ಉತ್ಪನ್ನಗಳನ್ನು ರಫ್ತು ಮಾಡಲಾಗಿದ್ದು, ಇದು ದೇಶದ ಪೆರಿಷಬಲ್ ಉತ್ಪನ್ನಗಳ ಪೈಕಿ ಶೇ. ೩೧ ರಷ್ಟು. ಕೋಳಿ, ಹೂಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, ೨೮,೧೮೨ ಮೆಟ್ರಿಕ್‌ಟನ್‌ನಷ್ಟು ಕೋಳಿ ಹಾಗೂ ೧,೨೯೬ ಮೆ.ಟ ಹೂವುಗಳನ್ನು ರಫ್ತು ಮಾಡಲಾಗಿದೆ. ಪೆರಿಷಬಲ್ ಉತ್ಪನ್ನಗಳನ್ನು ಅತ್ಯಾಧುನಿಕ ತಂತ್ರಜ್ಞಾನ ದಿಂದ ಕೆಡದಂತೆ ಸಂಸ್ಕರಿಸಿ ವೇಗವಾಗಿ ರಫ್ತು ಮಾಡಲಾಗುತ್ತಿದೆ. ಇದರಿಂದ ರಫ್ತು ಬೇಡಿಕೆಯೂ ಸಹ ದಿನೇದಿನೆ ಹೆಚ್ಚುತ್ತಲೇ ಇದೆ ಎಂದು ಬಿಐಎಎಲ್ ಸ್ಟಾರ್ಟಜಿ ಆಂಡ್ ಡೆವಲಪ್‌ಮೆಂಟ್ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ರಾಜ್ಯಕ್ಕೆ ರಸಗೊಬ್ಬರ ಬೇಡಿಕೆ ಪೂರೈಸುವ ಭರವಸೆ

ನವದೆಹಲಿ/ಬೆಂಗಳೂರು, ಅ. ೮: ಈ ಬಾರಿ ರಾಜ್ಯದಲ್ಲಿ ಬಿತ್ತನೆ ಹೆಚ್ಚಾಗಿದ್ದು ರಸಗೊಬ್ಬರಕ್ಕೂ ಬೇಡಿಕೆ ಹೆಚ್ಚಿದೆ. ಹೀಗಾಗಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ರಸಗೊಬ್ಬರ ಪೂರೈಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ರಾಸಾಯನಿಕ ಹಾಗೂ ಆರೋಗ್ಯ ಸಚಿವ ಮನಸುಖ್ ಮಾಂಡವಿ ಅವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕಕ್ಕೆ ರಸಗೊಬ್ಬರ ಡಿಎಪಿ ೩೨ ಸಾವಿರ ಮೆಟ್ರಿಕ್ ಟನ್, ಎಂಓಪಿ ೧೦ ಸಾವಿರ ಮೆಟ್ರಿಕ್ ಟನ್ ಕೇಂದ್ರಕ್ಕೆ ಬೇಡಿಕೆಯಿಟ್ಟಿದ್ದು ಒಂದು ವಾರದೊಳಗೆ ಡಿಎಪಿ ಪೂರೈಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು.

ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್

ಬೆಂಗಳೂರು, ಅ. ೮: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿ ದಸರಾ ಅಂಗವಾಗಿ ೧೦೦೦ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ತಾ. ೧೩ ರಿಂದ ೨೧ ರ ತನಕ ಹೆಚ್ಚುವರಿ ಬಸ್‌ಗಳು ಸಂಚಾರ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮನದ ಪ್ರಕಟಣೆ ತಿಳಿಸಿದೆ. ಕೆಎಸ್‌ಆರ್‌ಟಿಸಿ ವೆಬ್‌ಸೈಟ್ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಲು ಸಹ ಅವಕಾಶ ನೀಡಲಾಗಿದೆ. ಕ.ರಾ.ರ.ಸಾ. ನಿಗಮದ ಪ್ರವಾಸಿ ಪ್ಯಾಕೇಜ್ ಹೆಚ್ಚುವರಿ ವಿಶೇಷ ಬಸ್‌ಗಳು ಬೆಂಗಳೂರು ನಗರದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ಗೆ ಸಂಚಾರ ನಡೆಸಲಿದೆ. ಕುದ್ರೋಳಿ ಕ್ಷೇತ್ರದಲ್ಲಿ ಚಾಲನೆ ಅಂತರರಾಜ್ಯದ ತಿರುವತಿ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪುಣೆ, ಪಣಜಿ ಮುಂತಾದ ಸ್ಥಳಗಳಿಗೆ ಬಸ್‌ಗಳು ಸಂಚಾರ ನಡೆಸಲಿವೆ. ಹೆಚ್ಚುವರಿ ವಿಶೇಷ ಬಸ್‌ಗಳ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.