ಮಡಿಕೇರಿ: ಮಡಿಕೇರಿ ನಗರದ ಹಲವು ಬಡಾವಣೆಗಳಲ್ಲಿ ಶಾಸಕ ಅಪ್ಪಚು ರಂಜನ್ ಅವರ ನೇತೃತ್ವದಲ್ಲಿ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕವನ್ನು ಅಳವಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಾಧ್ಯಕ್ಷ ಮನು ಮಂಜುನಾಥ್, ಉಮೇಶ್ ಸುಬ್ರಮಣಿ, ಅಪ್ಪಣ್ಣ, ಮುರುಗನ್, ವಾರ್ಡ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರುಗಳು ಹಾಜರಿದ್ದರು. ಕೂಡಿಗೆ: ಕುಶಾಲನಗರ ತಾಲೂಕು ವ್ಯಾಪ್ತಿಯ ಐದು ಗ್ರಾಮ ಪಂಚಾಯತಿಯ ಬಿಜೆಪಿ ಬೂತ್ ಸಮಿತಿಯ ವಿವಿಧ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದವರ ಮನೆಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ನಾಮಫಲಕಗಳನ್ನು ಅಳವಡಿಕೆ ಮಾಡಲಾಯಿತು.

ಕುಶಾಲನಗರ ತಾಲೂಕು ವ್ಯಾಪ್ತಿಯ ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್ಗಳ ಬೂತ್ ಅಧ್ಯಕ್ಷರ ಮನೆಗಳಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ೧೫ ದಿನಗಳವರೆಗೆ ಪಕ್ಷದ ಸೇವಾ ಸಂಘಟನೆಯನ್ನು ಹಮ್ಮಿಕೊಂಡಿದ್ದು, ಅದರ ಮೂಲಕ ಬೂತ್ ಅಧ್ಯಕ್ಷರುಗಳ ಮನೆ ಮನೆಗೆ ಭೇಟಿ ನೀಡಿ ಮೋದಿ ಹುಟ್ಟುಹಬ್ಬದ ವಿಚಾರಗಳನ್ನು ತಿಳಿಸಿ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಸೇವೆ ಹಾಗೂ ಸಾಧನೆಯ ಬಗ್ಗೆ ಪೋಸ್ಟ್ ಕಾರ್ಡ್ನ ಮೂಲಕ ಬರೆದು ತಿಳುಸುವ ಸಂಬAಧ ಪೋಸ್ಟ್ ಕಾರ್ಡುಗಳನ್ನು ನೀಡಿದರು.

ಆಯಾ ಬೂತ್ ಅಧ್ಯಕ್ಷರ ಮನೆಗಳಿಗೆ ತೆರಳಿದ ಸಂದರ್ಭದಲ್ಲಿ ಆರತಿ ಮಾಡಿ ಶಾಸಕರನ್ನು ಸ್ವಾಗತಿಸಲಾಗುತ್ತಿತ್ತು. ಈ ಸಂದರ್ಭ ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಶ್ರೀನಿವಾಸ್, ಮಂಜಳಾ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜಯಣ್ಣ ಗಣೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾದಪ್ಪ, ಮಂಡಲ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ಮೋಕ್ಷಿಕ್, ಮಂಡಲ ಯುವ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ್ ಹಾಗೂ ಹಲವಾರು ಕಾರ್ಯಕರ್ತರು ಇದ್ದರು.ವೀರಾಜಪೇಟೆ: ವೀರಾಜಪೇಟೆ ತಾಲೂಕಿನಾದ್ಯಂತ ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರುಗಳ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ನಡೆಯಿತು. ಆರ್ಜಿ ಗ್ರಾಮದ ಕಲ್ಲುಬಾಣೆಯ ಬೂತ್ ಅಧ್ಯಕ್ಷರಾಗಿ ಬಿ.ಸಿ. ಕಿರಣ್, ಕಿರುಮಕ್ಕಿಯಲ್ಲಿ ಶಿವಕುಮಾರ್ ಪೆರುಂಬಾಡಿಯಲ್ಲಿ ಜನಾರ್ದನ್ ಆಯ್ಕೆಯಾಗಿದ್ದು ಇವರುಗಳ ಮನೆಯಲ್ಲಿ ನಾಮಫಲಕ ಅಳವಡಿಸಲಾಯಿತು.

ಈ ಸಂದರ್ಭ ಮಾತನಾಡಿದ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಪಕ್ಷದ ವತಿಯಿಂದ ನಡೆಸಲಾಗುವ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ವೀರಾಜಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ನೆಲ್ಲೀರ ಚಲನ್‌ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಚ್ಚಪಂಡ ಮಹೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರಣ್ ಭೀಮಯ್ಯ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕಿಲನ್ ಗಣಪತಿ, ಖಜಾಂಚಿ ಚೆಪ್ಪುಡಿರ ಮಾಚಯ್ಯ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಾಟೇರಿರ ಬೋಪಣ್ಣ, ತಾಲೂಕು ಬಿಜೆಪಿ ಕಾರ್ಯದರ್ಶಿ ಅಮ್ಮಣಿಚಂಡ ರಂಜು ಪೂಣಚ್ಚ, ಓಬಿಸಿ ಮೋರ್ಚಾದ ರಾಜ್ಯ ಸಮಿತಿ ಸದಸ್ಯ ಬಿ.ಎಂ.ಗಣೇಶ್, ಕಲ್ಲುಬಾಣೆ ಬಿಜೆಪಿ ಬೂತ್ ಅಧ್ಯಕ್ಷ ಬಿ.ಸಿ. ಕಿರಣ್, ಶಕ್ತಿ ಕೇಂದ್ರದ ಪ್ರಮುಖರು, ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.ಗುಡ್ಡೆಹೊಸೂರು: ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಬಿ.ಜೆ.ಪಿ. ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಸುವ ಕಾರ್ಯ ನಡೆಯಿತು. ಗುಡ್ಡೆಹೊಸೂರು ಪಂಚಾಯಿತಿ ವ್ಯಾಪ್ತಿಯ ಮಾದಪಟ್ಟಣ ಬೂತ್ ಅಧ್ಯಕ್ಷರುಗಳಾದ ಸುರೇಶ್ ಮತ್ತು ಮಹೇಶ್, ಅತ್ತೂರಿನ ಜಯಣ್ಣ, ಬೊಳ್ಳೂರಿನ ಮನುಕುಮಾರ್, ಬಸವನಹಳ್ಳಿಯ ಪವನ್ ಕುಮಾರ್, ಬೆಟ್ಟಗೇರಿಯ ಐಲಪಂಡ ಕುಶಾಲಪ್ಪ ಅವರುಗಳ ಮನೆಗಳಲ್ಲಿ ನಾಮಫಲಕಗಳನ್ನು ಅಳವಡಿಸಲಾಯಿತು.

ಈ ಸಂದÀರ್ಭ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಮಾದಪ್ಪ, ಜಿಲ್ಲಾ ಕಾರ್ಯದರ್ಶಿ ಪುಷ್ಪಾನಾಗೇಶ್, ತಾಲೂಕು ಅಧ್ಯಕ್ಷ ಮನುಕುಮಾರ್ ರೈ. ತಾಲೂಕು ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ಮೋಹಿತ್, ಗೌತಮ್, ಹಿರಿಯರಾದ ಕುಮಾರಪ್ಪ ಮುಖಂಡರಾದ ಅಮೃತರಾಜ್, ಚರಣ್, ಶಿವ, ಗುಡ್ಡೆಹೊಸೂರು ಗ್ರಾ,ಪಂ. ಅಧ್ಯಕ್ಷೆ ನಂದಿನಿ ಹಾಗೂ ಇತರರು ಇದ್ದರು.