ಕೂಡಿಗೆ, ಅ.೭: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಹುಲುಗುಂದ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಮನೆಯೊಂದರ ಗೋಡೆ ಬಿರುಕು ಬಿಟ್ಟ ಘಟನೆ ಕೂಡಿಗೆ, ಅ.೭: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಹುಲುಗುಂದ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಮನೆಯೊಂದರ ಗೋಡೆ ಬಿರುಕು ಬಿಟ್ಟ ಘಟನೆ ಮನೆ ಮಂದಿ ಆತಂಕದಲ್ಲಿ ಮನೆಯನ್ನು ಖಾಲಿ ಮಾಡಿ ಪಕ್ಕದ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಕೂಡುಮಂಗಳೂರು ಗ್ರಾಪಂ ಸದಸ್ಯ ಮಣಿಕಂಠ ಪರಿಶೀಲನೆ ನಡೆಸಿ ಜೆಸಿಬಿ ಬಳಸಿ ನೀರು ತಗ್ಗು ಪ್ರದೇಶಕ್ಕೆ ನುಗ್ಗದಂತೆ ಚರಂಡಿ ನಿರ್ಮಾಣ ಕಾರ್ಯ ನಡೆಸಿದರು.
ಗ್ರಾಮ ಪಂಚಾಯಿತಿ ವತಿಯಿಂದ ಮಾಸಿಕ ಸಭೆಯಲ್ಲಿ ಚರ್ಚಿಸಿ ಅನುದಾನವನ್ನು ಕಾಯ್ದಿರಿಸಿ ಉಪಯುಕ್ತವಾಗುವ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯ ಮಾಡಿರುತ್ತಾರೆ.