ಕುಶಾಲನಗರ, ಅ. ೭: ರಾಷ್ಟಿçÃಯ ಶಿಕ್ಷಣ ನೀತಿ ಜಾರಿಯಾದ ಬಳಿಕ ದೇಶದಲ್ಲಿ ಸಾಕಷ್ಟು ಶಿಕ್ಷಣ ಪದ್ಧತಿ ಬದಲಾಗಲಿದ್ದು, ವಿದ್ಯಾರ್ಥಿಗಳು ಪ್ರೌಢಾವಸ್ಥೆಗೆ ಬರುವಷ್ಟರಲ್ಲಿ ಬದುಕು ಕಟ್ಟಿಕೊಳ್ಳುವ ಶಿಕ್ಷಣ ನೂತನ ವ್ಯವಸ್ಥೆಯಲ್ಲಿದೆ ಎಂದು ಉಪನ್ಯಾಸಕ ಡಾ. ಕೂಡಕಂಡಿ ದಯಾನಂದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಭವನದಲ್ಲಿ ಕನ್ನಡ ಸಿರಿ ಕಸಾಪ ಸ್ನೇಹ ಬಳಗ ಏರ್ಪಡಿಸಿದ್ದ ‘ರಾಷ್ಟಿçÃಯ ಶಿಕ್ಷಣ ನೀತಿ ಮತ್ತು ನಾವು’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ನೂತನ ಶಿಕ್ಷಣ ¥ದ್ಧತಿಯಲ್ಲಿ ವಿದ್ಯಾರ್ಥಿಗಳು ತಮ್ಮ ಇಚ್ಚೆಯಂತೆ ತಮಗೆ ಸುಲಭ ಎನ್ನಿಸಿದ ವಿಷಯಗಳನ್ನು ಆರಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬಹುದಾದ ಅವಕಾಶವಿದ್ದು, ಪ್ರಾಥಮಿಕ ಹಂತದಿAದಲೇ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಯನ್ನು ತರಲಾಗಿದೆ ಎಂದರು.

ಕಾರ್ಯಕ್ರಮದ ಮತ್ತೊಂದು ಭಾಗವಾಗಿ ಹಿರಿಯ ಸಾಹಿತಿ ಕಿಗ್ಗಾಲು ಗಿರೀಶ್ ಅವರ ‘ಜಾಲದಲ್ಲಿ ಸಿಲುಕಿದ ಜಾಹ್ನವಿ’ ಪತ್ತೆದಾರಿ ಕಾದಂಬರಿಯನ್ನು ಸಾಹಿತಿ ಕಣಿವೆ ಭಾರಧ್ವಾಜ್ ಬಿಡುಗಡೆಗೊಳಿಸಿ ಮಾತನಾಡಿ, ಲೇಖನ,ಕಾದಂಬರಿಗಳನ್ನು ಓದುವ ಆಸಕ್ತಿಯನ್ನು ಯುವ ಸಮೂಹ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಾಹಿತಿ ಕಿಗ್ಗಾಲು ಗಿರೀಶ್ ಮಾತನಾಡಿ, ಪತ್ತೆದಾರಿ ಕಾದಂಬರಿ ಕಥೆಗಳು ನಶಿಸುತ್ತಿದ್ದು, ಕೆಲವೇ ಕೆಲವು ಪತ್ತೆದಾರಿ ಕಥೆಗಳು ಓದುಗರಿಗೆ ತಲುಪುತ್ತಿದೆ, ಕಾದಂಬರಿ ಮಡಿಕೇರಿಯ ಲಾಡ್ಜ್ ವೊಂದರಲ್ಲಿ ನಡೆದ ಮಹಿಳೆಯ ಹತ್ಯೆ ಕುರಿತು ನೈಜ ಮಾಹಿತಿ ಗಳನ್ನು ಒಳಗೊಂಡAತೆ ರಚಿಸಲಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಶಾಲನಗರ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪುಷ್ಷ ರಾಷ್ಟಿçÃಯ ಶಿಕ್ಷಣ ನೀತಿ ಕುರಿತು ಮಾಹಿತಿಗಳನ್ನು ವಿದ್ಯಾರ್ಥಿ ಗಳು ಆಯಾ ಕಾಲಕ್ಕೆ ತಕ್ಕಂತೆ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ನಿಕಟ ಪೂರ್ವ ಅಧ್ಯಕ್ಷ, ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಹಾಯದಿಂದಾಗಿ ಕರ್ನಾಟಕ ಸಾಹಿತ್ಯ ಪರಿಷತ್ತು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳು ವಂತಾಯಿತು ಎಂದು ಹೇಳಿದರು

ಕಾರ್ಯಕ್ರಮದಲ್ಲಿ ರಾಷ್ಟಿçÃಯ ಶಿಕ್ಷಣ ನೀತಿ ಮತ್ತು ನಾವು ಕುರಿತಂತೆ ಜಿಲ್ಲೆಯ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇತ್ತೀಚೆಗೆ ಉತ್ತಮ ಶಿಕ್ಷಕರಾಗಿ ರಾಜ್ಯ ಪ್ರಶಸ್ತಿ ಪಡೆದ ಲೋಕೇಶ್ ಹೆಬ್ಬಾಲೆ, ಉ.ಕ. ನಾಗೇಶ್ ಮತ್ತು ಸದಾಶಿವಯ್ಯ ಪಲ್ಲೇದ್ ಅವರನ್ನು ಗಣ್ಯರು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಕುಶಾಲನಗರ ರೋಟರಿ ಕ್ಲಬ್ ಅಧ್ಯಕ್ಷ ರಂಗಸ್ವಾಮಿ, ರಾಜ್ಯ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಚೇತನ್, ಜಿಲ್ಲಾ ಶಿಕ್ಷಕರ ಸಂಘದ ಸದಸ್ಯ ಸೋಮಶೇಖರ್, ಮಡಿಕೇರಿ ತಾಲೂಕು ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷ ಕುಡೆಕಲ್ಲು ಸಂತೋಷ್, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.