ಕೂಡಿಗೆ. ಅ. ೮: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮತ್ತು ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕೂಡಿಗೆಯ ಶಕ್ತಿ ವೃದ್ಧಾಶ್ರಮದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಡೆಯಿತು. ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ವಹಿಸಿದ್ದರು. ಹಿರಿಯ ನಾಗರಿಕರ ಹಕ್ಕುಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಜಿಲ್ಲಾ ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಕೆ.ಜೆ. ವಿಮಲ ಮಾತನಾಡಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಗ್ರಾಮದ ಪ್ರಮುಖರಾದ ಕಾಂತರಾಜ್ ಕೇಂದ್ರದ ವ್ಯವಸ್ಥಾಪಕ ಚಂದ್ರು ಸೇರಿದಂತೆ ಆಶ್ರಮದಲ್ಲಿರುವ ಹಿರಿಯ ನಾಗರಿಕರು ಹಾಜರಿದ್ದರು.