ಪೊನ್ನಂಪೇಟೆ, ಅ. ೭: ವೀರಾಜಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವೀರಾಜ ಪೇಟೆ ವಕೀಲರ ಸಂಘದ ಸಹಯೋಗ ದಲ್ಲಿ ಅಮೃತ ಮಹೋತ್ಸವದ ಅಂಗವಾಗಿ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ ಹಿರಿಯ ನಾಗರಿಕರ ಮತ್ತು ವಿಶೇಷಚೇತನ ವ್ಯಕ್ತಿಗಳ ಹಕ್ಕುಗಳು ಎಂಬ ವಿಷಯದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವೀರಾಜಪೇಟೆ ತಾಲೂಕು ಸಿವಿಲ್ ನ್ಯಾಯಾಧೀಶರಾದ ಮೋನಪ್ಪ ಅವರು ಮಾತನಾಡಿ, ಹಿರಿಯ ನಾಗರಿಕರ ನೆರವಿಗಾಗಿ ಕಾನೂನಿನಡಿಯಲ್ಲಿ ಅನೇಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಯಾವುದೇ ಹಿರಿಯ ನಾಗರಿಕರು ತಮ್ಮ ಮಕ್ಕಳಿಂದ ನಿರ್ಲಕ್ಷö್ಯಕ್ಕೊಳಗಾದರೆ ಕಾನೂನು ಅವರ ನೆರವಿಗೆ ಬರುತ್ತದೆ ಪೊನ್ನಂಪೇಟೆ, ಅ. ೭: ವೀರಾಜಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವೀರಾಜ ಪೇಟೆ ವಕೀಲರ ಸಂಘದ ಸಹಯೋಗ ದಲ್ಲಿ ಅಮೃತ ಮಹೋತ್ಸವದ ಅಂಗವಾಗಿ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ ಹಿರಿಯ ನಾಗರಿಕರ ಮತ್ತು ವಿಶೇಷಚೇತನ ವ್ಯಕ್ತಿಗಳ ಹಕ್ಕುಗಳು ಎಂಬ ವಿಷಯದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವೀರಾಜಪೇಟೆ ತಾಲೂಕು ಸಿವಿಲ್ ನ್ಯಾಯಾಧೀಶರಾದ ಮೋನಪ್ಪ ಅವರು ಮಾತನಾಡಿ, ಹಿರಿಯ ನಾಗರಿಕರ ನೆರವಿಗಾಗಿ ಕಾನೂನಿನಡಿಯಲ್ಲಿ ಅನೇಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಯಾವುದೇ ಹಿರಿಯ ನಾಗರಿಕರು ತಮ್ಮ ಮಕ್ಕಳಿಂದ ನಿರ್ಲಕ್ಷö್ಯಕ್ಕೊಳಗಾದರೆ ಕಾನೂನು ಅವರ ನೆರವಿಗೆ ಬರುತ್ತದೆ ಮಾತನಾಡಿದ ನ್ಯಾಯಾಧೀಶರು ವಿಶೇಷಚೇತನರಿಗೆ ಮಾಸಾಶನ, ಉಚಿತ ಸರ್ಕಾರಿ ಬಸ್ ಪಾಸ್, ಆದಾಯ ತೆರಿಗೆಯಲ್ಲಿ ರಿಯಾಯಿತಿ, ಸ್ವ ಉದ್ಯೋಗಕ್ಕಾಗಿ ಸಹಾಯಧನ ಸೌಲಭ್ಯಗಳು ದೊರಕುತ್ತವೆ. ಅಂಗವಿಕಲತೆಯನ್ನು ಹೊಂದಿರುವವರು ಜಿಲ್ಲಾ ವೈದ್ಯರಿಂದ ಪಡೆದ ಪ್ರಮಾಣಪತ್ರವನ್ನು ಸಲ್ಲಿಸಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದರು.

ಅಕ್ಷರ ದಾಸೋಹ ಸಹ ನಿರ್ದೇಶಕ ಕೆ.ಆರ್. ರಾಜೇಶ್ ಮಾತನಾಡಿ ವಯಸ್ಸಾದ ತಂದೆ ತಾಯಿಗಳನ್ನು ಸಲಹುವುದು ಮಕ್ಕಳ ಕರ್ತವ್ಯವಾಗಿದೆ ಎಂದರು. ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು ಮಾತನಾಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಚೇತನರನ್ನು ಗುರುತಿಸಿ ೨೦೦೦ ರೂಪಾಯಿ ಸಹಾಯ ಧನ ನೀಡಲಾಗುತ್ತಿದೆ. ಹಾಗೂ ಹಿರಿಯ ನಾಗರಿಕರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೂಡ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣಾಧಿಕಾರಿ ಡಿ. ಕುಮಾರ್, ಇನ್ನಿತರರು ಹಾಜರಿದ್ದರು. ಪೊನ್ನಂಪೇಟೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಾಡ ಜೀವನ್ ಸ್ವಾಗತಿಸಿದರು. ದೈಹಿಕ ಶಿಕ್ಷಕ ಮಹೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.