ಮಡಿಕೇರಿ, ಅ. ೮: ಜಿಲ್ಲೆಯಲ್ಲಿ ಶುಕ್ರವಾರ ೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೫ ಪ್ರಕರಣಗಳು ಆರ್‌ಟಿಪಿಸಿಆರ್ ಮತ್ತು ೧ ಪ್ರಕರಣ ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧, ಸೋಮವಾರಪೇಟೆ ತಾಲೂಕಿನಲ್ಲಿ ೩, ವೀರಾಜಪೇಟೆ ತಾಲೂಕಿನಲ್ಲಿ ೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೫,೦೮೦ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೫೨ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೪,೩೬೦ ಮಂದಿ ಗುಣಮುಖರಾಗಿದ್ದಾರೆ. ೨೯೪ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಇದುವರೆಗೆ ಒಟ್ಟು ೪೨೬ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೩೯ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೦.೧೮ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.