ಮಡಿಕೇರಿ, ಅ. ೯: ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಕಂದಾಯ ಪರಿವೀಕ್ಷಕರಾಗಿ ಬಿ.ಜಿ. ವೆಂಕಟೇಶ್ ಅವರನ್ನು ನೇಮಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ತಾಲೂಕು ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ್ ಅವರಿಗೆ ಬಡ್ತಿ ನೀಡಿ ಸಂಪಾಜೆ ವಲಯಕ್ಕೆ ವರ್ಗಾಯಿಸಲಾಗಿದೆ.