ಮಡಿಕೇರಿ, ಅ. ೯: ತಾ. ೧೭ರಂದು ನಡೆಯಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ ಜಾತ್ರಾ ಪ್ರಯುಕ್ತ ದೇವರ ಸನ್ನಿಧಿಗಳಲ್ಲಿ ಸ್ವಚ್ಛತಾ ಕಾರ್ಯ ತಾ. ೧೧ರಂದು ಇರುವ ಹಿನ್ನೆಲೆ ಬೆಳಿಗ್ಗೆ ೬ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಶ್ರೀ ಭಗಂಡೇಶ್ವರ ದೇವಾಲಯ ಮತ್ತು ಶ್ರೀ ತಲಕಾವೇರಿ ದೇವಾಲಯದಲ್ಲಿ ಮಧ್ಯಾಹ್ನ ೨ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ದೇವಾಲಯಗಳಿಗೆ ಸಾರ್ವಜನಿಕ ಭಕ್ತಾದಿಗಳಿಗೆ ಪ್ರವೇಶ ಹಾಗೂ ಸೇವೆಗಳು ಇರುವುದಿಲ್ಲ ಎಂದು ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.