ವೀರಾಜಪೇಟೆ, ಅ. ೯: ಬೆಂಗಳೂರಿನ ಗಾಂಧಿ ಭವನದಲ್ಲಿ ಎಸ್.ಎಸ್. ಕಲಾಸಂಗಮ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿನಿ ಬಿ.ಎಸ್. ಲಾವಣ್ಯ ಅವರಿಗೆ ಕಿಡ್ಸ್ ಟ್ಯಾಲೆಂಟ್ ರತ್ನ ಪ್ರಶಸ್ತಿ ಪಡೆದಿದ್ದಾಳೆ.

ಈಕೆ ವೀರಾಜಪೇಟೆ ಸಮೀಪದ ಬೇಟೋಳಿ ಗ್ರಾಮದ ಬಿ.ಜಿ. ನಟರಾಜ್ ಮತ್ತು ಸುನಂದ ಅವರ ಪುತ್ರಿಯಾಗಿದ್ದು, ಸಂತ ಅನ್ನಮ್ಮ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ.

ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದೂಷಿ ಪ್ರೇಮಾಂಜಲಿ ಆಚಾರ್ಯ ಅವರ ಶಿಷ್ಯೆ.