ವೀರಾಜಪೇಟೆ, ಆ. ೯: ಅಮೃತ ಮಹೋತ್ಸವದ ಸವಿನೆನಪಿಗಾಗಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಅಮೃತ ಗ್ರಾಮ ಯೋಜನೆಗೆ ಆಯ್ಕೆಯಾದ ಹಿನ್ನೆಲೆ ಗ್ರಾಮಸ್ಥರ ಸಮ್ಮುಖದಲ್ಲಿ ಇತ್ತೀಚೆಗೆ ವಿಶೇಷ ಗ್ರಾಮ ಸಭೆ ಆಯೋಜಿಸಲಾಗಿತ್ತು.
ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ವಿಶೇಷ ಗ್ರಾಮ ಸಭೆಗೆ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಡಿಕೇರಿಯಂಡ ಎಂ. ಶೀಲಾ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಡೆಯಿತು. ಬಳಿಕ ಮಾತನಾಡಿದ ಪಂಚಾಯಿತಿ ಪಿ.ಡಿ.ಓ. ಪ್ರಮೋದ್ ಪಿ.ಕೆ. ಅವರು, ಭಾರತದ ೭೫ನೇ ಸ್ವಾತಂತ್ರದ ಸವಿನೆನಪಿಗಾಗಿ ಅಮೃತ ಗ್ರಾಮ ಯೋಜನೆ ಅಡಿಯಲ್ಲಿ ರಾಜ್ಯದ ೭೫೦ ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿದ್ದು, ಆಯ್ಕೆಯಾದ ಗ್ರಾಮ ಪಂಚಾಯಿತಿಗಳಲ್ಲಿ ಕೆದಮುಳ್ಳೂರು ಗ್ರಾಮ ಪಂಚಾಯಿತಿಯು ಒಂದಾಗಿದೆ. ಯೋಜನೆ ಅಡಿಯಲ್ಲಿ ಪ್ರತಿ ಗ್ರಾಮದಲ್ಲಿ ಮನೆ ಮನೆಗಳಿಗೆ ನಲ್ಲಿ ನೀರು ಸರಬರಾಜು, ಬೀದಿ ದೀಪಗಳ ಅಳವಡಿಕೆ, ಘನತ್ಯಾಜ್ಯ ವಿಂಗಡಣೆ ಘಟಕ, ಸೌರವಿದ್ಯುತ್ ಅಳವಡಿಕೆ, ಡಿಜಿಟಲ್ ಲೈಬ್ರರಿಗಳೊಂದಿಗೆ ಸುಸಜ್ಜಿತವಾಗಿ ಶಾಲೆಗಳನ್ನು ಸ್ಥಾಪಿಸಿ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವುದು ಹಾಗೂ ಅನುಷ್ಠಾನಗೊಳಿ ಸಲಾಗುವುದು ಎಂದು ಅಮೃತ ಗಾಮ ಯೋಜನೆಗಳ ವಿಷಯಗಳನ್ನು ಗ್ರಾಮಸ್ಥರಿಗೆ ತಿಳಿಸಿದರು.
ಸಭೆಯಲ್ಲಿ ಪಂಚಾಯಿತಿ ನೋಡಲ್ ಅಧಿಕಾರಿ ಮತ್ತು ಪಶು ವೈದ್ಯಾಧಿಕಾರಿ ಡಾ. ಟಿ.ಜೆ. ರಾಕೇಶ್ ಅವರು ಅಮೃತ ಗ್ರಾಮ ಯೋಜನೆ ಗಳಲ್ಲಿ ಗ್ರಾಮಸ್ಥರಿಗೆ ಅನುಕೂಲಗಳನ್ನು ಹಾಗೂ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಒದಗಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಘನತ್ಯಾಜ್ಯ ವಿಲೇವಾರಿಗಳಿಗೆ ಸಂಬAಧಿಸಿದAತೆ ಬಾರಿಕಾಡ್ ಎಂಬಲ್ಲಿ ಸುಸಜ್ಜಿತವಾದ ತ್ಯಾಜ್ಯ ನಿರ್ವಹಣೆ ಘಟಕ ಆರಂಭಿಸಲಾಗಿದೆ. ತಂತ್ರಜ್ಞಾನವನ್ನು ಆಳವಡಿಸಿಕೊಂಡು ಮಕ್ಕಳಿಗೆ ಹಾಗೂ ಗ್ರಾಮಸ್ಥರಿಗೆ ಓದಿನಲ್ಲಿ ಸದಾಬಿರುಚಿ ಹೊಂದಲು ರೂ. ೪ ಲಕ್ಷದ ವೆಚ್ಚದಲ್ಲಿ ಸುಸಜ್ಜಿತವಾದ ಡಿಜಿಟಲ್ ಲೈಬ್ರರಿ ಆರಂಭವಾಗಿದೆ. ಜಲ ಮಿಷನ್ ಯೋಜನೆ ಯಡಿಯಲ್ಲಿ ಮನೆ ಮನೆಗಳಿಗೆ ಕುಡಿಯುವ ನೀರು ನೀಡುವ ಉದ್ದೇಶದಿಂದ ನೇರ ನಲ್ಲಿ ನೀರು ಯೋಜನೆಗಳಿಗೆ ಮುಂದಾಗಿದ್ದು ಪಂಚಾಯಿತಿಗೆ ರೂ. ೧೩೦೦ ಪಾವತಿ ಮಾಡಿದಲ್ಲಿ ನೇರವಾಗಿ ಕುಡಿಯುವ ನೀರು ಸರಬರಾಜು ಮಾಡಬಹು ದಾಗಿದೆ. ಎಲ್ಲಾ ಯೋಜನೆಗಳು ಗ್ರಾಮ ವಿಕಾಸಕ್ಕೆ ಮೀಸಲಾಗಿದ್ದು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎನ್.ಎಂ. ಶೀಲಾ ಅವರು ನಮ್ಮ ಗ್ರಾಮ ಪಂಚಾಯಿತಿ ಅಮೃತ ಗ್ರಾಮ ಯೋಜನೆಗೆ ಆಯ್ಕೆ ಯಾಗಿರುವುದು ಸಂತೋಷದಾಯಕ ಬೆಳವಣಿಗೆಯಾಗಿದೆ. ಆಯ್ಕೆ ಹಿಂದೆ ಶ್ರಮವಹಿಸಿ ದುಡಿದ ಪಂಚಾಯಿತಿ ಪಿ.ಡಿ.ಓ. ಪ್ರಮೋದ್ ಅವರು ಪಂಚಾಯಿತಿ ಸಿಬ್ಬಂದಿಗಳು ಹಾಗೂ ಎಲ್ಲಾ ವಾರ್ಡ್ನ ಚುನಾಯಿತ ಪ್ರತಿನಿಧಿ ಶ್ರಮವು ಶ್ಲಾಘನೀಯ ಎಂದರು. ಗ್ರಾಮಸ್ಥರು ಅಮೃತ ಗ್ರಾಮ ಯೋಜನೆಯ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಂಡು ಮಾದರಿ ಗ್ರಾಮ ಪಂಚಾಯಿತಿ ಯನ್ನಾಗಿ ಮಾಡುವಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ವಿವಿಧ ಯೋಜನೆಗಳಿಗೆ ಸಂಭAದಿಸಿದAತೆ ಸುಮಾರು ೨೦೦ಕ್ಕೂ ಅಧಿಕ ಮಂದಿ ಅರ್ಜಿಗಳನ್ನು ಸಲ್ಲಿಸಿದರು. ಪಿ.ಡಿ.ಓ. ಪ್ರಮೋದ್ ಪಿ.ಕೆ. ಸ್ವಾಗತಿಸಿ, ವಂದಿಸಿದರು. ವಿಶೇಷ ಗ್ರಾಮ ಸಭೆಯಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಕೊಟ್ಟೋಳಿ, ಪಾಲಂಗಾಲ ಮತ್ತು ಕೆದಮುಳ್ಳೂರು ವ್ಯಾಪ್ತಿಯ ಗ್ರಾಮಸ್ಥರು ಹಾಜರಿದ್ದರು.