ಮಡಿಕೇರಿ, ಅ.೯: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನೂತನ ರಾಜ್ಯಾಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ಅವರೊಂದಿಗೆ ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಎ.ಯಾಕುಬ್ ಪಕ್ಷ ಸಂಘಟನೆ ಕುರಿತು ಸಮಾಲೋಚನೆ ನಡೆಸಿದರು.

ಬೆಂಗಳೂರಿನಲ್ಲಿ ಭೇಟಿಯಾದ ಅವರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ವಕ್ಫ್ ಕಾರ್ಯಚಟುವಟಿಕೆ ಮತ್ತು ಅಲ್ಪಸಂಖ್ಯಾತರ ಘಟಕದ ಕುರಿತು ಚರ್ಚಿಸಿದರು.

ಈ ಸಂದರ್ಭ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಎ.ಕೆ.ಹಾರಿಸ್ ಕೊಳಕೇರಿ ಹಾಜರಿದ್ದರು.