ಸೋಮವಾರಪೇಟೆ, ಅ. ೮: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಭಾರತೀಯ ಜನತಾ ಪಾರ್ಟಿಯಿಂದ ಆಯೋಜಿಸಿರುವ ಸೇವಾ ಹೀ ಸಮರ್ಪಣ್ ಅಭಿಯಾನದಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪಟ್ಟಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಶಿಬಿರಕ್ಕೆ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ಮಂಡಲ ಅಧ್ಯಕ್ಷ ಚಂದ್ರಶೇಖರ್ ಹೇರೂರು, ಪಕ್ಷದ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಅರುಣ್ ಭೀಮಯ್ಯ, ಯುವ ಮೋರ್ಚಾ ರಾಜ್ಯ ಸಮಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಪ್ರಭಾರಿ ರೂಪಾ ಸತೀಶ್, ಪಕ್ಷದ ಕಾರ್ಯದರ್ಶಿ ಮೋಕ್ಷಿಕ್, ಮಂಡಲ ಮಾಜಿ ಅಧ್ಯಕ್ಷ ಕುಮಾರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಶಿಬಿರದಲ್ಲಿ ೪೪ ಮಂದಿ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ರಕ್ತದಾನ ಮಾಡಿದರು. ಮಡಿಕೇರಿ ರಕ್ತ ನಿಧಿ ಕೇಂದ್ರದ ಡಾ. ಕರುಂಬಯ್ಯ ಸೇರಿದಂತೆ ಸಿಬ್ಬಂದಿಗಳು ಶಿಬಿರ ನಡೆಸಿದರು.