ಸೋಮವಾರಪೇಟೆ, ಅ. ೯: ಪಟ್ಟಣಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಘಟಕದಲ್ಲಿ ದುರಸ್ತಿ ಕೆಲಸ ನಡೆಯುತ್ತಿರು ವುದರಿಂದ, ವಾರ್ಡ್ಗಳಿಗೆ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ಮೂಲಕ ಸ್ವಚ್ಛ ಕುಡಿಯುವ ನೀರು ಸರಬರಾಜು ಮಾಡಲು ಪ.ಪಂ. ಕ್ರಮ ವಹಿಸಬೇಕೆಂದು ನಗರ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ. ಈ ಬಗ್ಗೆ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದು, ಪಟ್ಟಣದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು ಒತ್ತಾಯಿಸಿದ್ದಾರೆ.
ಇದರೊಂದಿಗೆ ಪಟ್ಟಣ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನಗಳನ್ನು ಕೂಡಲೇ ಹಂಚಬೇಕು. ಕಳೆದ ೩ ವರ್ಷಗಳಿಂದ ಎಸ್.ಸಿ.ಎಸ್.ಟಿ, ಅಂಗವಿಕಲರಿಗೆ ನೀಡಬೇಕಾದ ಸೌಲಭ್ಯಗಳನ್ನು ಒದಗಿಸಬೇಕು. ಮಳೆಗಾಲದಲ್ಲಿ ಹೈಟೆಕ್ ಮಾರುಕಟ್ಟೆ ದುರಸ್ತಿ ನೆಪದಲ್ಲಿ ಲಕ್ಷಾಂತರ ರೂ.ಗಳನ್ನು ವ್ಯಯಿಸಲಾಗುತ್ತಿದೆ. ವೈಜ್ಞಾನಿಕವಾಗಿ ಕಾಮಗಾರಿಯನ್ನು ಮಾಡಬೇಕು. ಇಂದಿರಾ ಕ್ಯಾಂಟಿನ್ ಕಾಮಗಾರಿ ಪ್ರಾರಂಭವಾಗುವುದಕ್ಕೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಎಚ್.ಎ.ನಾಗರಾಜ್ ಆಗ್ರಹಿಸಿದ್ದಾರೆ.
ಎಇಇಗೆ ದೂರು: ಮಾಜಿ ಪ್ರಧಾನಿ ದಿ. ಇಂದಿರಾಗಾAಧಿ ಅಭಿಮಾನಿಗಳ ಸಂಘದ ವತಿಯಿಂದ ಕಕ್ಕೆಹೊಳೆ ಜಂಕ್ಷನ್‌ನಲ್ಲಿ ನಿರ್ಮಾಣವಾಗಿದ್ದ ಬಸ್ ಶೆಲ್ಟರ್‌ನ್ನು ಬಿಜೆಪಿ ಕಾರ್ಯಕರ್ತರು ಒಡೆದು, ನೂತನವಾಗಿ ಬಸ್ ನಿಲ್ದಾಣ ನಿರ್ಮಿಸುತ್ತಿದ್ದಾರೆ.
ಹೈವೆ ಮಾರ್ಜಿನ್ ಒಳಗೆ ಕಟ್ಟುತ್ತಿರುವುದರಿಂದ ಕೂಡಲೇ ಕ್ರಮಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆಯ ಎಇಇ ಮೋಹನ್ ಕುಮಾರ್ ಅವರಿಗೆ ಕಾಂಗ್ರೆಸ್‌ನಿAದ ದೂರು ನೀಡಲಾಗಿದೆ ಎಂದು ನಾಗರಾಜ್ ತಿಳಿಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಕಟ್ಟಡ ದುರಸ್ತಿ ಪಡಿಸಲು ಪಟ್ಟಣ ಪಂಚಾಯಿತಿ ಇಂಜಿನಿಯರ್ ಅವರಿಂದ ಅನುಮತಿ ಕೇಳಿದ ಸಂದರ್ಭ ಹೈವೆ ಮಾರ್ಜಿನ್ ಇರುವ ಕಾರಣ, ಅನುಮತಿ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ ಈಗ ಬಸ್ ಶೆಲ್ಟರ್ ಒಡೆದು ಕಟ್ಟಡ ಕಟ್ಟುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಇಲಾಖೆಯಿಂದ ಯಾವುದೇ ಅನುಮತಿ ನೀಡಿಲ್ಲ ಎಂದು ಎಇಇ ತಿಳಿಸಿದ್ದು, ತಕ್ಷಣ ನೋಟೀಸ್ ನೀಡಲಾಗುವುದು ಎಂಬುದಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ನಾಗರಾಜ್ ತಿಳಿಸಿದ್ದಾರೆ.
ಪಟ್ಟಣ ಪಂಚಾಯಿತಿಗೆ ಮನವಿ ಸಲ್ಲಿಕೆ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಸೇವಾ ದಳದ ತಾಲೂಕು ಅಧ್ಯಕ್ಷ ಬಿ.ಬಸವರಾಜು, ಪಕ್ಷದ ಮುಖಂಡರಾದ ಹೆಚ್.ಪಿ. ರಾಜಪ್ಪ, ಬ್ಲಾಕ್ ಉಪಾಧ್ಯಕ್ಷ ಮಂಜುನಾಥ್, ಮಹಮ್ಮದ್ ಶಫಿ, ಹೆಚ್.ಜಿ. ರಘು, ಅಜಯ್ ಇದ್ದರು.