ಮಡಿಕೇರಿ, ಅ. ೯: ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ತಾ.೧೨ ರಂದು ನಗರದ ಕ್ರಿಸ್ಟಲ್ ಹಾಲ್‌ನಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ಗೌಡ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಚುನಾಯಿತ ಅಧ್ಯಕ್ಷರಾದ ಮಿಥುನ್ ಗೌಡ ಹಾಗೂ ಇತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ.
ಸಮಾರಂಭದಲ್ಲಿ ಸಂಸದ ಡಿ.ಕೆ ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಶಾಸಕ ಯತೀಂದ್ರ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷ ರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಂಚೂಣಿ ರಾಜ್ಯ ಮತ್ತು ಜಿಲ್ಲಾ ನಾಯಕರು ಪಾಲ್ಗೊಳ್ಳಲಿದ್ದಾರೆ.
ಜಿಲ್ಲೆಗೆ ಆಗಮಿಸುವ ಯುವ ಪಡೆಯ ಮುಖಂಡರನ್ನು ನಗರದ ಸುದರ್ಶನ್ ವೃತ್ತದ ಬಳಿ ಸ್ವಾಗತಿಸಲಾಗುವುದು. ಬಳಿಕ ಫೀ.ಮಾ. ಕೆ.ಎಂ ಕಾರ್ಯಪ್ಪ ಹಾಗೂ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕ್ರಿಸ್ಟಲ್ ಸಭಾಂಗಣದವರೆಗೆ ಮೆರವಣಿಗೆ ಸಾಗಲಿದೆ ಎಂದರು.
ಗೋಷ್ಠಿಯಲ್ಲಿ ಸೋಮವಾರ ಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ ರತನ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್ ಕಿರಣ್, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಂಕಿತ್ ಪೊನ್ನಪ್ಪ, ಸೋಮವಾರಪೇಟೆ ಯುವ ಕಾಂಗ್ರೆಸ್ ಮುಖಂಡ ಡಿ. ಸುಜಿತ್ ಉಪಸ್ಥಿತರಿದ್ದರು