ಭಾಗಮಂಡಲ, ಅ. ೧೧: ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಇಂದು ಶಾಸಕ ಕೆ.ಜಿ. ಬೋಪಯ್ಯ ಭಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಬಾರಿ ಹಗಲು ವೇಳೆ ತೀರ್ಥೋದ್ಭವ ಜರುಗಲಿದ್ದು ಭಕ್ತಾದಿಗಳಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಕ್ರಮ ವಹಿಸುವಂತೆ ಸೂಚಿಸಿದರು. ತ್ರಿವೇಣಿ ಸಂಗಮದಲ್ಲಿ ಪಿಂಡಪ್ರದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಚಕರನ್ನು ನೇಮಿಸಿ ಕೊಳ್ಳುವಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಲು ಬಿದಿರುಗಳನ್ನು ಅರಣ್ಯ ಇಲಾಖೆಯಿಂದ ಪೊಲೀಸ್ ಇಲಾಖೆಗೆ ಒದಗಿಸಿಕೊಟ್ಟು ಸಹಕರಿಸುವಂತೆ, ಸ್ವಯಂಸೇವಕರಿಗೆ

(ಮೊದಲ ಪುಟದಿಂದ) ಗುರುತಿನ ಚೀಟಿಗಳ ಪಟ್ಟಿ ಮಾಡಿ ನೀಡುವಂತೆ ನಿರ್ದೇಶನ ನೀಡಿದರು.

ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯ ಕೆಲಸಗಳು ಆಗುತ್ತಿವೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಮಾರ್ ಮಾಹಿತಿ ನೀಡಿದರು. ಬೀದಿದೀಪಗಳನ್ನು ಅಳವಡಿಸುವ ಕೆಲಸಗಳಾಗಿವೆ. ನೀರಿನ ಟ್ಯಾಂಕ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಆಗಿದೆ. ಶೌಚಾಲಯ ನಿರ್ಮಾಣ ಕಾರ್ಯ ಇನ್ನೆರಡು ದಿನಗಳಲ್ಲಿ ಪೂರ್ಣಗೊಳ್ಳಲಿವೆ. ರಸ್ತೆ ದುರಸ್ತಿ ಕಾರ್ಯ ನಡೆದಿಲ್ಲ. ತೀರ್ಥೋದ್ಭವಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಕೂಡಲೇ ರಸ್ತೆ ಕಾಮಗಾರಿ ಕೈಗೊಳ್ಳಬೇಕಾಗಿದೆ ಎಂದರು.

ಈ ಸಂದರ್ಭ ಲೋಕೋಪ ಯೋಗಿ ಇಲಾಖೆಯ ಇಂಜಿನಿಯರ್‌ಗೆ ದೂರವಾಣಿ ಕರೆಮಾಡಿ ರಸ್ತೆ ದುರಸ್ತಿ ಕಾರ್ಯವನ್ನು ಶೀಘ್ರ ಕೈಗೆತ್ತಿ ಕೊಳ್ಳುವಂತೆ ಶಾಸಕರು ಸೂಚಿಸಿದರು. ಭಾಗಮಂಡಲದ ಮಾರ್ಕೆಟ್ ಬಳಿ ತಲಕಾವೇರಿಗೆ ತೆರಳುವ ಭಕ್ತರ ಥರ್ಮಲ್ ಸ್ಕಾö್ಯನಿಂಗ್ ಮಾಡ ಲಾಗುತ್ತದೆ ಎಂದು ಭಾಗಮಂಡಲ ವೈದ್ಯಾಧಿಕಾರಿ ಡಾ. ಪೊನ್ನಮ್ಮ ಹೇಳಿದರು. ಭಾಗಮಂಡಲದಲ್ಲಿ ತಾ. ೧೪ ರಿಂದ ಮೂರು ದಿನಗಳ ಕಾಲ ನಿರಂತರವಾಗಿ ಕೋವಿಡ್ ಪರೀಕ್ಷೆ ನಡೆಯಲಿದೆ ಎಂದರು.

ನಿರಂತರ ಮಳೆಯಿಂದಾಗಿ ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಸ್ನಾನಘಟ್ಟದಲ್ಲಿ ಭಕ್ತರಿಗೆ ಸ್ನಾನದ ವ್ಯವಸ್ಥೆಗಾಗಿ ಹಗ್ಗಗಳನ್ನು ಕಟ್ಟುವಂತೆ ಸೂಚಿಸಿದರು. ಹೆಚ್ಚಿನ ಹೋಮ್ ಗಾರ್ಡ್ಗಳನ್ನು ನಿಯೋಜನೆ ಮಾಡಿಕೊಳ್ಳಬೇಕು. ಎರಡು ದಿನಗಳ ಕಾಲ ಯಾವುದೇ ರೀತಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಭಾಗಮಂಡಲ ದೇವಾಲಯದ ಒಳಭಾಗ ಹಾಗೂ ಗುಡಿಗಳ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ದೇವಾಲಯದಲ್ಲಿ ಎಲ್ಲ ಕೆಲಸಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ತಾ. ೧೫ರ ಒಳಗಾಗಿ ಎಲ್ಲಾ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ ಎಂದು ಭಗಂಡೇಶ್ವರ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಶಾಸಕರಿಗೆ ಮಾಹಿತಿ ನೀಡಿದರು.

ಈ ಸಂದರ್ಭ ರಾಜ್ಯ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ಮೂಡಾ ಅಧ್ಯಕ್ಷ ರಮೇಶ್ ಹೊಳ್ಳ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಮಿತಾ, ಸದಸ್ಯರಾದ ಕಾಳನ ರವಿ ಜಯಂತ್, ನಾಗೇಶ್ ನಿತ್ಯಾನಂದ, ದಿನ್ ಬೋಪಣ್ಣ ಸ್ಥಳೀಯರಾದ ಪಿ.ಎಂ. ರಾಜೀವ್, ಬಾಲಕೃಷ್ಣ, ಭರತ್, ಕೀರ್ತಿ ಕುಮಾರ್, ಡೀನ್ ಬೋಪಣ್ಣ ಮತ್ತಿತರರು ಉಪಸ್ಥಿತರಿದ್ದರು.

-ಸುನೀಲ್, ಸುಧೀರ್