ಕೂಡಿಗೆ, ಅ. ೧೦: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊರೆನೂರು ಮತ್ತು ಬಾಣಾವರ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು ಮುಂದಿನ ದಿನಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.
ಕಾವೇರಿ ನೀರಾವರಿ ನಿಗಮದ ಮೂಲಕ ಟೆಂಡರ್ ಪ್ರಕ್ರಿಯೆ ಅರಂಭವಾಗಿ ತೊರೆನೂರು ಗ್ರಾಮ ಮುಖ್ಯ ರಸ್ತೆ ಮತ್ತು ಹಾಸನ ಹೆದ್ದಾರಿಗೆ ಹೊಂದಿಕೊAಡAತೆ ಇರುವ ತೊರೆನೂರು-ಬಾಣಾವರ ರಸ್ತೆಯ ಬೈರಪ್ಪನಗುಡಿಯ ರಸ್ತೆ ಕಾಮಗಾರಿಯು ಒಂದೂವರೆ ಕೋಟಿ ರೂ ವೆಚ್ಚದಲ್ಲಿ ನಡೆಯಲಿದೆ. ಈ ರಸ್ತೆಯು ಚಿಕ್ಕ ಅಳುವಾರದಲ್ಲಿರುವ ಸ್ನಾತಕೋತ್ತರ ಪದವಿ ಕೇಂದ್ರಕ್ಕೆ ಮತ್ತು ಪಶುಪಾಲನಾ ಇಲಾಖೆಯ ತರಬೇತಿ ಕೇಂದ್ರಗಳಿಗೆ ತೆರಳಲು ಹತ್ತಿರದ ಮಾರ್ಗವಾಗಿರುತ್ತದೆ ಅದ್ದರಿಂದಾಗಿ ಈ ಸಾಲಿನಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಉಪಾಧ್ಯಕ್ಷ ಎಂ.ಟಿ. ಬೀಬಿ, ತೊರೆನೂರು ಸಹಕಾರ ಸಂಘದ ನಿರ್ದೇಶಕರಾದ ಚಂದ್ರಪ್ಪ, ಟಿ.ಕೆ. ಪಾಂಡುರAಗ, ಕುಶಾಲನಗರ ವ್ಯವಸಾಯೋತ್ಪನ ಮಾರಾಟ ಸಹಕಾರ ಸಂಘದ ಉಪಾಧ್ಯಕ್ಷ ಜಗದೀಶ್ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್ ದೇವರಾಜ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.