ಮಡಿಕೇರಿ, ಅ. ೧೧: ಪ್ರಕೃತಿಯ ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಪಾತ್ರವು ಮಹತ್ವವಾದುದು ಎಂದು ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಎಚ್.ಟಿ. ಅನಿಲ್ ಹೇಳಿದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ರಾಷ್ಟಿçÃಯ ಹಸಿರು ಪಡೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನಗರದ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಇಕೋ ಕ್ಲಬ್‌ನ ಆಶ್ರಯದಲ್ಲಿ ‘ವನ ಹಾಗೂ ಜೀವನೋಪಾಯ: ಜನ ಮತ್ತು ಜಗತ್ತಿನ ಉಳಿವು’ ಎಂಬ ಉದ್ಘೋಷಣೆಯಡಿ ನಗರದ ಡಿಡಿಪಿಐ ಕಚೇರಿಯ ಸಭಾಂಗಣದಲ್ಲಿ ೬೭ನೇ ವನ್ಯಜೀವಿ ಸಪ್ತಾಹ: ೨೦೨೧ರ ಅಂಗವಾಗಿ ‘ನಮ್ಮ ನಡೆ ವನ್ಯಜೀವಿಗಳ ಸಂರಕ್ಷಣೆ ಕಡೆಗೆ’ ಕುರಿತು ಶಾಲಾ ಮಕ್ಕಳಲ್ಲಿ ವನ್ಯಜೀವಿಗಳ ಕುರಿತು ಅರಿವು ಮೂಡಿಸುವ ಸಂಬAಧ ಏರ್ಪಡಿಸಿದ್ದ ಜಿಲ್ಲಾಮಟ್ಟದ ಪರಿಸರ ಜಾಗೃತಿ ಅಭಿಯಾನದಲ್ಲಿ ಪರಿಸರ ಘೋಷಣಾ ಭಿತ್ತಿಪತ್ರಗಳನ್ನು ಅನಾವರಣಗೊಳಿಸಿ ಮಾತನಾಡಿದರು.
ಭವಿಷ್ಯದ ಉತ್ತಮ ಪರಿಸರ ವ್ಯವಸ್ಥೆಗಾಗಿ ವನ್ಯ ಸಂಪತ್ತನ್ನು ಸಂರಕ್ಷಿಸದಿದ್ದರೆ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯ ಮಡಿಕೇರಿ, ಅ. ೧೧: ಪ್ರಕೃತಿಯ ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಪಾತ್ರವು ಮಹತ್ವವಾದುದು ಎಂದು ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಎಚ್.ಟಿ. ಅನಿಲ್ ಹೇಳಿದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ರಾಷ್ಟಿçÃಯ ಹಸಿರು ಪಡೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನಗರದ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಇಕೋ ಕ್ಲಬ್‌ನ ಆಶ್ರಯದಲ್ಲಿ ‘ವನ ಹಾಗೂ ಜೀವನೋಪಾಯ: ಜನ ಮತ್ತು ಜಗತ್ತಿನ ಉಳಿವು’ ಎಂಬ ಉದ್ಘೋಷಣೆಯಡಿ ನಗರದ ಡಿಡಿಪಿಐ ಕಚೇರಿಯ ಸಭಾಂಗಣದಲ್ಲಿ ೬೭ನೇ ವನ್ಯಜೀವಿ ಸಪ್ತಾಹ: ೨೦೨೧ರ ಅಂಗವಾಗಿ ‘ನಮ್ಮ ನಡೆ ವನ್ಯಜೀವಿಗಳ ಸಂರಕ್ಷಣೆ ಕಡೆಗೆ’ ಕುರಿತು ಶಾಲಾ ಮಕ್ಕಳಲ್ಲಿ ವನ್ಯಜೀವಿಗಳ ಕುರಿತು ಅರಿವು ಮೂಡಿಸುವ ಸಂಬAಧ ಏರ್ಪಡಿಸಿದ್ದ ಜಿಲ್ಲಾಮಟ್ಟದ ಪರಿಸರ ಜಾಗೃತಿ ಅಭಿಯಾನದಲ್ಲಿ ಪರಿಸರ ಘೋಷಣಾ ಭಿತ್ತಿಪತ್ರಗಳನ್ನು ಅನಾವರಣಗೊಳಿಸಿ ಮಾತನಾಡಿದರು.
ಭವಿಷ್ಯದ ಉತ್ತಮ ಪರಿಸರ ವ್ಯವಸ್ಥೆಗಾಗಿ ವನ್ಯ ಸಂಪತ್ತನ್ನು ಸಂರಕ್ಷಿಸದಿದ್ದರೆ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯ ಗಳನ್ನು ತಮ್ಮ ಸ್ನೇಹಿತರು, ನಾಗರಿಕರಿಗೆ ಕಳಿಸುವ ಮೂಲಕ ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಡಿಡಿಪಿಐ ಎಚ್.ಕೆ. ಮಂಜುನಾಥ್ ಮಾತನಾಡಿ, ಕಾಡು ಮತ್ತು ವನ್ಯ ಜೀವಿಗಳು ದಿನೇ ದಿನೆ ಕ್ಷೀಣಿಸುತ್ತಿವೆ. ಈ ಬಗ್ಗೆ ನಾವು ಜಾಗೃತಿ ವಹಿಸದಿದ್ದಲ್ಲಿ ಭವಿಷ್ಯದಲ್ಲಿ ಗಂಡಾAತರ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದರು.
ರೋಟರಿ ಮಿಸ್ಟಿ ಹಿಲ್ಸ್ನ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಮಾತನಾಡಿ, ಸಸ್ಯ ಮತ್ತು ಪ್ರಾಣಿ ಸಂಕುಲಗಳನ್ನು ಸಂರಕ್ಷಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.
ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್ ಮಾತನಾಡಿ, ವನ್ಯಜೀವಿ ಸಪ್ತಾಹದ ಅಂಗವಾಗಿ ಪ್ರಕೃತಿ, ಅರಣ್ಯ, ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಣೆ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ರವೀಂದ್ರ ರೈ, ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆಯ ಉಪ ನಿರ್ದೇಶಕ ಗೌರವಕುಮಾರ್ ಶೆಟ್ಟಿ, ಗ್ರಾಹಕರ ವೇದಿಕೆಯ ಅಧ್ಯಕ್ಷ ಎ.ಎ. ಚಂಗಪ್ಪ, ಕೋಶಾಧಿಕಾರಿ ಕೆ.ಎಂ. ಗಿರೀಶ್, ಶಿಕ್ಷಣಾಧಿಕಾರಿಗಳಾದ ಕೆ. ಕಾಂತರಾಜು, ಎಂ. ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಟಿ. ವೆಂಕಟೇಶ್, ರೋಟರಿ ಸಂಸ್ಥೆಯ ಸದಸ್ಯೆ ಶಿಲ್ಪ ರೈ, ಶಾಲೆಯ ಮುಖ್ಯೋಪಾಧ್ಯಾಯಿನಿ ಡಿ.ಎಂ. ರೇವತಿ, ಜಿಲ್ಲಾ ವಿಜ್ಞಾನ ಪರಿಷತ್ತಿನ ಸಹ ಕಾರ್ಯದರ್ಶಿ ಜಿ.ಶ್ರೀಹರ್ಷ,
ಬಿಆರ್ ಸಿ ನಳಿನಿ, ಇಸಿಓ ಎಂ.ಎಚ್. ಹರೀಶ್, ಬಿಆರ್ ಪಿ.ಕೆ.ಯು. ರಂಜಿತ್ ಇತರರು ಇದ್ದರು. ಎಸ್.ಟಿ. ವೆಂಕಟೇಶ್ ಕಾರ್ಯಕ್ರಮ ನಿರ್ವಹಿಸಿದರು.
ಇದೇ ವೇಳೆಯಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತ ಭಿತ್ತಫಲಕಗಳನ್ನು ಹಿಡಿದು ಜನಜಾಗೃತಿ ಮೂಡಿಸಿದರು.