ಮಡಿಕೇರಿ, ಅ. ೧೦: ಸೇವಾ ಮತ್ತು ಸಮರ್ಪಣಾ ಅಭಿಯಾನ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಚರಿತ್ರೆ ಹಾಗೂ ಆದರ್ಶ ಕುರಿತು ವಿವರಣಾತ್ಮಕ ಚಿತ್ರ ಪ್ರದರ್ಶನವನ್ನು ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬೀನ್ ದೇವಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜನರಲ್ ತಿಮ್ಮಯ್ಯ ಶಾಲೆಯ ವಿದ್ಯಾರ್ಥಿಗಳು ಚಿತ್ರ ಹಾಗೂ ಸಂದೇಶವನ್ನು ವೀಕ್ಷಿಸಿದರು.
ಪ್ರಧಾನಿ ನರೇಂದ್ರ ಮೋದಿ ಬಾಲ್ಯದಿಂದ ಬೆಳೆದು ಬಂದ ರೀತಿಯನ್ನು ನೋಡಿ ವಿದ್ಯಾರ್ಥಿಗಳು ಉತ್ಸುಕರಾದರು. ಜೀವನ ಚರಿತ್ರೆ ಸಂದೇಶವನ್ನು ವಿದ್ಯಾರ್ಥಿಗಳು ಕುತೂಹಲದಿಂದ ಓದಿದರು. ಸಂಘಟಕರು ಈ ಸಂಬAಧ ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.
ಈ ವೇಳೆ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ರಾಜ್ಯ ಕಾರ್ಯಕಾರಿಣಿ ಸಭೆ ಸದಸ್ಯ ಮಹೇಶ್ ತಿಮ್ಮಯ್ಯ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್ವಿನ್, ಪ್ರಸಾದ್ ಚಂಗಪ್ಪ, ಕಾರ್ಯಕ್ರಮ ಸಂಚಾಲಕ ನವನೀತ್ ಪೊನ್ನೆಟ್ಟಿ, ಶರಣ್ ಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಅಂಜನ್, ವಿನಯ್ ರಾಜ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ಪೂವಯ್ಯ, ಜಿಲ್ಲಾ ಪದಾಧಿಕಾರಿಗಳಾದ ಪ್ರವೀಣ್, ರಾಮನಾಥನ್, ವಿನೋದ್ ಗಣಪತಿ ಇತರರು ಇದ್ದರು.