ಕುಶಾಲನಗರ, ಅ. ೧೦: ಸ್ವಾತಂತ್ರೊö್ಯÃತ್ಸವದ ಅಮೃತಮಹೋತ್ಸವ ಅಂಗವಾಗಿ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವನ್ಯಜೀವಿ ಸಪ್ತಾಹದ ಅಂಗವಾಗಿ ‘ಪಾನ್ ಇಂಡಿಯಾ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನ’ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಶಾಲನಗರ ಸಿವಿಲ್ ನ್ಯಾಯಾಧೀಶರಾದ ಸಂದೀಪ್ ರೆಡ್ಡಿ ದುಷ್ಚಟಗಳಿಂದ ಉಂಟಾಗುವ ಪರಿಣಾಮ ಮತ್ತು ತಡೆಗಟ್ಟುವಿಕೆ ಹಾಗೂ ಪರಿಸರದ ಬಗ್ಗೆ ಪ್ರತಿಯೊಬ್ಬ ನಾಗರಿಕನಿಗೂ ಇರಬೇಕಾದ ಕಾಳಜಿ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ವಕೀಲ ಕೆ.ಬಿ. ಮೋಹನ್ ಸಂವಿಧಾನದಲ್ಲಿ ಮಹಿಳೆಯರಿಗೆ ಇರುವ ಹಕ್ಕು ಮತ್ತು ಮೀಸಲಿರುವ ಕಾಯ್ದೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಕುಶಾಲನಗರ ಪ.ಪಂ., ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಕುಶಾಲನಗರ ತಾ.ಪಂ. ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.