ಸಿದ್ದಾಪುರ, ಅ. ೧೦ : ಸಿಪಿಐ(ಎಂ) ಪಕ್ಷದ ಜಿಲ್ಲಾ ಸಮ್ಮೇಳನವು ಸಿದ್ದಾಪುರದಲ್ಲಿ ತಾ. ೧೭ ಹಾಗೂ ೧೮ ರಂದು ೨ ದಿನಗಳ ಕಾಲ ನಡೆಯಲಿದೆ ಎಂದು ಸಿಪಿಐ(ಎಂ) ಪಕ್ಷದ ಮುಖಂಡ ಡಾ. ಐ.ಆರ್ ದುರ್ಗಾಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ರಾಷ್ಟçಮಟ್ಟದ ಸಮ್ಮೇಳನವು ೨೦೨೨ ರ ಏಪ್ರಿಲ್ ತಿಂಗಳಿನಲ್ಲಿ ಕೇರಳದ ಕಣ್ಣನೂರಿನಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ರಾಜ್ಯಮಟ್ಟದ ಸಮ್ಮೇಳನವು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ತಾ. ೨೯ ರಿಂದ ೩೧ ರವರೆಗೆ ನಡೆಯಲಿದೆ. ಇದರ ಅಂಗವಾಗಿ ಜಿಲ್ಲಾ ಸಮ್ಮೇಳನವು ತಾ. ೧೭ ಹಾಗೂ ೧೮ ರಂದು ಸಿದ್ದಾಪುರದ ಎಸ್.ಎನ್.ಡಿ.ಪಿ ಕಟ್ಟಡದಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಸಿಪಿಐ(ಎಂ) ಪಕ್ಷದ ರಾಜ್ಯ ಮುಖಂಡರುಗಳಾದ ಬಾಲಕೃಷ್ಣ ಶೆಟ್ಟಿ ಹಾಗೂ ಧರ್ಮೇಶ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಚರ್ಚಿಸಲಾಗುವುದೆಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಿಪಿಐ(ಎಂ) ಪಕ್ಷದ ಪ್ರಮುಖರಾದ ಎನ್.ಡಿ ಕುಟ್ಟಪ್ಪ, ಹೆಚ್.ಬಿ ರಮೇಶ್, ಹಾಜರಿದ್ದರು.