ಮಡಿಕೇರಿ, ಅ. ೧೧: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಸೋಮವಾರಪೇಟೆ, ವೀರಾಜಪೇಟೆ ಮತ್ತು ಮಡಿಕೇರಿ ತಾಲೂಕು ಯುವ ಒಕ್ಕೂಟ ಹಾಗೂ ಬೇತು, ನಾಪೋಕ್ಲು ಎ.ಪಿ.ಜಿ. ಗೆಳೆಯರ ಬಳಗ ಇವರ ಸಹಯೋಗದಲ್ಲಿ ೨೦೨೧-೨೨ ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ತಾ. ೨೫ ರಂದು ಮಡಿಕೇರಿ ತಾಲೂಕಿನ ನಾಪೋಕ್ಲು ಜೂನಿಯರ್ ಕಾಲೇಜು ಸಭಾಂಗಣದಲ್ಲಿ ನಡೆಯಲಿವೆ.

ಜನಪದ ನೃತ್ಯ, ಜಾನಪದ ಗೀತೆ, ಏಕಾಂಕ ನಾಟಕ, ಶಾಸ್ತಿçÃಯ ಗಾಯನ, ಶಾಸ್ತಿçÃಯ ವಾದನ, ಹರ‍್ಮೋನಿಯಂ, ಗಿಟಾರ್, ಶಾಸ್ತಿçÃಯ ನೃತ್ಯ, ಆಶುಭಾಷಣ ಕಾರ್ಯಕ್ರಮಗಳು ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಯುವಕ, ಯುವತಿಯರು, ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ. ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವವರ ವಯೋಮಿತಿಯು ೧೫ ರಿಂದ ೩೫ ವರ್ಷಗಳಾಗಿರಬೇಕು. ಹಾಗೂ ವಯೋಮಿತಿಯ ಬಗ್ಗೆ ಎಸ್‌ಎಸ್‌ಎಲ್‌ಸಿ ಅಂಕ ಅಥವಾ ಶಾಲಾ ವರ್ಗಾವಣೆ ಪತ್ರದ ಪ್ರತಿ ಅಥವಾ ಶಾಲೆಯಿಂದ ಹುಟ್ಟಿದ ದಿನಾಂಕದ ದೃಢೀಕರಣ ಪತ್ರ ಕಡ್ಡಾಯವಾಗಿ ತರುವುದು ಇಲ್ಲವಾದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಬೆಳಗ್ಗೆ ೧೦ ಗಂಟೆಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳುವುದು.

ವೈಯಕ್ತಿಕ ಮತ್ತು ತಂಡದ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.

ಈ ಯುವಜನೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯಿಂದ ಯುವಕ, ಯುವತಿಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದೆ.

ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ಮೊ.೯೪೮೧೨೧೩೯೨೦, ನವೀನ್ ದೇರಳ, ಅಧ್ಯಕ್ಷರು ತಾಲೂಕು ಒಕ್ಕೂಟ, ಮಡಿಕೇರಿ ಮೊ-೯೪೪೯೯೫೨೦೦೮, ಸಾಬು ಸುಬ್ರಮಣಿ ಮೊ.೯೮೪೫೫೭೧೨೯೦ ಮತ್ತು ಅಧ್ಯಕ್ಷರು, ಸದಸ್ಯರು ಎಪಿಜಿ ಗೆಳೆಯರ ಬಳಗ ನಾಪೋಕ್ಲು ಇವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.