ಮಡಿಕೇರಿ, ಅ. ೧೧: ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಕುಶಾಲನಗರ ರಾಧಾಕೃಷ್ಣ ಬಡಾವಣೆಯಲ್ಲಿ ನಿರ್ಮಾಣವಾಗಿರುವ ನೂತನ ಸಭಾಂಗಣ ‘ದಿವ್ಯ ದರ್ಶನ ಭವನ’ ತಾ.೧೩ ರಂದು (ನಾಳೆ) ಬೆಳಿಗ್ಗೆ ೧೦:೩೦ಕ್ಕೆ ಉದ್ಘಾಟನೆಗೊಳ್ಳಲಿದೆ. ಬ್ರಹ್ಮಕುಮಾರೀಸ್ ಅಬುಪರ್ವತದ ಮೀಡಿಯಾ ವಿಭಾಗದ ಮುಖ್ಯಸ್ಥ ರಾಜಯೋಗಿ ಬ್ರಹ್ಮಕುಮಾರ ಕರುಣಾಜಿ ಉದ್ಘಾಟನೆ ಮಾಡಲಿದ್ದಾರೆ. ನೂತನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಕುಮಾರೀಸ್ ಮೈಸೂರು ಉಪವಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಲಕ್ಷಿö್ಮÃಜಿ ಅವರು ವಹಿಸಲಿದ್ದಾರೆ.
ವೀರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ.ಜಯವರ್ಧನ್, ಕುಶಾಲನಗರ ಎಸ್.ಎಲ್.ಎನ್ ವ್ಯವಸ್ಥಾಪಕ ನಿರ್ದೇಶಕ ಎಲ್.ಎನ್ ಸಾತಪ್ಪನ್, ಕೂಡಿಗೆ ಡಯಟ್ ಪ್ರಾಂಶುಪಾಲ ಸುರೇಶ್ ಅವರುಗಳು ಭಾಗವಹಿಸಲಿದ್ದಾರೆ.