ನಾಪೋಕ್ಲು, ಅ. ೧೦: ಪಕ್ಷದ ಸಂಘಟನೆಗೆ ಯುವ ಕಾಂಗ್ರೆಸ್ ಹೆಚ್ಚಿನ ಶ್ರಮವಹಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ವಿವೇಕ್ ಕರೆ ನೀಡಿದರು.
ನಾಪೋಕ್ಲುವಿನಲ್ಲಿ ಆಯೋಜಿಸ ಲಾಗಿದ್ದ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದ ಹಿನ್ನೆಲೆ, ಜನ ಸಾಮಾನ್ಯರಿಗೆ ಪಕ್ಷ ನೀಡಿರುವ ಸವಲತ್ತುಗಳ ಬಗ್ಗೆ ಯುವ ಕಾಂಗ್ರೆಸ್ ಪ್ರಚಾರಪಡಿಸುವ ಅಗತ್ಯವಿದೆ. ಆದರೆ ಮಾತ್ರ ಪಕ್ಷದ ಬಲವರ್ದನೆ ಸಾಧ್ಯ ಎಂದರು.
ರಾಜ್ಯ ಪ್ರದೇಶ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ಪಡೆಯಲು ಇಂದಿನಿAದಲೇ ಕಾರ್ಯಕರ್ತರು ಶ್ರಮವಹಿಸಬೇಕು ಎಂದರು.
ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ್ ಬೇಬ ಮಾತನಾಡಿ, ಬಡ ಜನರಿಗೆ, ದೀನದಲಿತರಿಗೆ ಹೆಚ್ಚಿನ ಸವಲತ್ತುಗಳನ್ನು ನೀಡಿರುವದು ಕಾಂಗ್ರೆಸ್ ಪಕ್ಷ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಡವರ ಏಳಿಗೆಗೆ ಶ್ರಮಿಸಿದ್ದಾರೆ. ಮುಂದೆಯೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಬಡವರ ಉದ್ಧಾರ ಸಾಧ್ಯ. ಪಕ್ಷದ ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಯುವ ಕಾರ್ಯಕರ್ತರು ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್, ರಿಯಾನ ರಾಜು, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಗೌಡ, ಹಿರಿಯರಾದ ಅರೆಯಡ ಸೋಮಪ್ಪ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ಮಾತನಾಡಿದರು.
ಈ ಸಂದರ್ಭದಲ್ಲಿ ಅರೆಯಡ ಸೋಮಪ್ಪ, ಕುಲ್ಲೇಟಿರ ಅರುಣ್ ಬೇಬ, ಉದಿಯಂಡ ಸುಭಾಷ್, ಅರುಣ ಹಾಗೂ ಮಹಮ್ಮದ್ ಖುರೇಶಿ ಅವರನ್ನು ಪಕ್ಷದ ವತಿಯಿಂದ ಸನ್ಮಾನಿಸಲಾಯಿತು.