ಸೋಮವಾರಪೇಟೆ, ಅ. ೧೦: ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಲ್ತರೆಶೆಟ್ಟಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳ್ಳದೇ ಇದ್ದರೂ ಬಿಲ್ ಪಾವತಿಸಲಾಗಿದೆ ಎಂದು ಶಾಂತಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಬಗ್ಗನ ಅನಿಲ್ ದೂರಿದ್ದಾರೆ.
೨೦೨೦-೨೧ನೇ ಸಾಲಿನ ೧೫ನೇ ಹಣಕಾಸು ಯೋಜನೆಯಡಿ ೧ ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಪೈಪ್‌ಲೈನ್ ಅಳವಡಿಸಬೇಕಿದ್ದರೂ ಸಹ ಕಾಮಗಾರಿ ನಿರ್ವಹಿಸದೇ ಅಧಿಕಾರಿಗಳು ಬಿಲ್ ಮಾಡಿದ್ದಾರೆ. ಈ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಲಾಗಿದೆ ಎಂದು ಅನಿಲ್ ತಿಳಿಸಿದ್ದಾರೆ.