ಮಡಿಕೇರಿ, ಅ. ೧೧: ಮಡಿಕೇರಿ ನಗರ ಮತ್ತು ಗೋಣಿಕೊಪ್ಪದಲ್ಲಿ ನಡೆಯಲಿರುವ ಆಯುಧ ಪೂಜೆ, ವಿಜಯದಶಮಿ, ದಸರಾ ಕಾರ್ಯಕ್ರಮದ ಸಂಬAಧ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅನುವಾಗುವಂತೆ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರಲ್ಲಿ ದತ್ತವಾಗಿರುವ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ತಾ. ೧೪ ರ ಬೆಳಿಗ್ಗೆ ೬ ಗಂಟೆಯಿAದ ೧೬ ಬೆಳಿಗ್ಗೆ ೬ ಗಂಟೆಯವರೆಗೆ ಮಡಿಕೇರಿ ನಗರ ಠಾಣಾ ಸರಹದ್ದಿನ ೧೦ ಕಿ.ಮೀ. ವ್ಯಾಪ್ತಿಯೊಳಗೆ ಮತ್ತು ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ಸರಹದ್ದಿನ ೧೦ ಕಿ.ಮೀ. ವ್ಯಾಪ್ತಿಯೊಳಗೆ ಬರುವ ಎಲ್ಲಾ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಭಾಗಮಂಡಲದಲ್ಲಿ
ತಾ. ೧೭ ರಂದು ತಲಕಾವೇರಿಯಲ್ಲಿ ನಡೆಯಲಿರುವ ಕಾವೇರಿ ತೀರ್ಥೋದ್ಭವ ಸಂಬAಧ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅನುವಾಗುವಂತೆ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ ರಲ್ಲಿ ದತ್ತವಾಗಿರುವ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು, ತಾ. ೧೬ ರಿಂದ ಬೆಳಿಗ್ಗೆ ೬ ಗಂಟೆಯಿAದ ೧೮ರ ಬೆಳಿಗ್ಗೆ ೬ ಗಂಟೆಯವರೆಗೆ ಭಾಗಮಂಡಲ ಠಾಣಾ ಸರಹದ್ದಿನ ಸುಮಾರು ೨೦ ಕಿ.ಮೀ. ವ್ಯಾಪ್ತಿಯಲ್ಲಿ (ಭಾಗಮಂಡಲ ಮತ್ತು ಚೇರಂಬಾಣೆ ಸೇರಿದಂತೆ) ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿರುವ ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮಧ್ಯಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.