ಕೂಡಿಗೆ, ಅ. ೧೦: ಸೋಮವಾರಪೇಟೆ ತಾಲೂಕು ಬಿಜೆಪಿ ರೈತ ಮೋರ್ಚಾ ಮಂಡಲದ ವತಿಯಿಂದ ಕೂಡಿಗೆಯ ದಂಡಿನಮ್ಮ ದೇವಾಲಯದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಸ್ವಚ್ಛತಾ ಕಾರ್ಯ ಹಾಗೂ ದೇವಾಲಯದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ಚಾಲನೆ ನೀಡಿದರು. ಈ ಸಂದರ್ಭ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಸೋಮವಾರಪೇಟೆ ತಾಲೂಕು ಬಿಜೆಪಿ ರೈತ ಮೋರ್ಚಾ ಮಂಡಲ ಅಧ್ಯಕ್ಷ ಟಿ.ಎಸ್. ಜಗದೀಶ್, ಉಪಾಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಶ್ರೀಕಾಂತ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕೆ.ಆರ್. ಮಂಜುಳಾ, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಲುವರಾಜ್, ಕೂಡಿಗೆ ದಂಡಿನಮ್ಮ ಮತ್ತು ಬಸವೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಕೆ. ಬೀಮಣ್ಣ, ಕಾರ್ಯದರ್ಶಿ ಕೆ.ಎಸ್. ಚಂದ್ರಶೇಖರ್ ಮತ್ತಿತರರಿದ್ದರು.