ಮಡಿಕೇರಿ, ಅ. ೧೨ : ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ತಾ. ೧೭ ರಂದು ಮಧ್ಯಾಹ್ನ ೧.೧೧ ಗಂಟೆಗೆ ಸಂಭವಿಸುವ ಪವಿತ್ರ ತೀರ್ಥೋದ್ಭವ ಸಂಬAಧ ತಲಕಾವೇರಿ ಮತ್ತು ಭಾಗಮಂಡಲದಲ್ಲಿನ ಪೂರ್ವ ಸಿದ್ಧತೆ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ಮೇದಪ್ಪ, ಅನೂಪ್ ಮಾದಪ್ಪ, ಭಗಂಡೇಶ್ವರ-ತಲಕಾವೇರಿ ದೇವಾಲಯದ ಇಒ ಕೃಷ್ಣಪ್ಪ, ತಾಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ್, ಇತರರು ಪಾಲ್ಗೊಂಡಿದ್ದರು. ಹಲವು ವಿಚಾರಗಳ ಕುರಿತು ಚರ್ಚೆ ನಡೆಯಿತು.