ಸಿದ್ದಾಪುರ, ಅ. ೧೨: ಸಾರ್ವಜನಿಕ ಕೆರೆಯ ಒತ್ತುವರಿಯನ್ನು ತೆರವುಗೊಳಿಸಿ ಕಂದಾಯ ಇಲಾಖೆ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿದೆ. ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದಲ್ಲಿ ಕಾಫಿ ತೋಟದ ಮಾಲೀಕರೊಬ್ಬರು ಕೆರೆಯನ್ನು ಒತ್ತುವರಿ ಮಾಡಿಕೊಂಡಿದ್ದುದನ್ನು ವೀರಾಜಪೇಟೆ ತಹಶೀಲ್ದಾರ್ ಡಾ. ಯೋಗಾನಂದ್ ನೇತೃತ್ವದಲ್ಲಿ ಜೆಸಿಬಿ ಮೂಲಕ ತೆರವುಗೊಳಿಸಿ, ಕಂದಾಯ ಇಲಾಖೆಯ ವಶಕ್ಕೆ ಪಡೆದು ಮಾಲ್ದಾರೆ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭ ಗ್ರಾಮಲೆಕ್ಕಿಗರಾದ ಓಮಪ್ಪ ಬಣಾಕರ್, ಮುತ್ತಪ್ಪ ಹಾಗೂ ಮಾಲ್ದಾರೆ ಪಿಡಿಓ ರಾಜೇಶ್ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.