ಸಿದ್ದಾಪುರ, ಅ. ೧೨: ಅಮ್ಮತ್ತಿ ಹೋಬಳಿ ನಾಡ ಕಚೇರಿಗೆ ವೀರಾಜಪೇಟೆ ತಹಶೀಲ್ದಾರ್ ಡಾ. ಯೋಗಾನಂದ ಭೇಟಿ ನೀಡಿ, ಕಚೇರಿಯಲ್ಲಿನ ಕಡತಗಳನ್ನು ಪರಿಶೀಲನೆ ಮಾಡಿದರು. ಅಲ್ಲದೇ ಗ್ರಾಮ ಲೆಕ್ಕಿಗರ ಬಳಿ ಮಾಹಿತಿ ಕಲೆ ಹಾಕಿದರು. ಈ ಸಂದರ್ಭ ಗ್ರಾಮ ಲೆಕ್ಕಿಗರಾದ ಓಮಪ್ಪ ಬಣಾಕರ್, ಮುತ್ತಪ್ಪ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.