ಮಡಿಕೇರಿ, ಅ. ೧೨: ಕೊಡಗು ಜಿಲ್ಲಾ ಹಾಪ್‌ಕಾಮ್ಸ್ ವತಿಯಿಂದ ಕರ್ನಾಟಕ ಸರ್ಕಾರ ತೋಟಗಾರಿಕಾ ಇಲಾಖೆ, ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳ ಇವುಗಳ ಸಹಯೋಗದೊಂದಿಗೆ ನಗರದ ಮುಖ್ಯ ರಸ್ತೆಯಲ್ಲಿ ನಿರ್ಮಿಸಲಾಗಿರುವ ಹಾಪ್‌ಕಾಮ್ಸ್ ನೂತನ ಕಟ್ಟಡ ತಾ. ೧೬ರಂದು ಉದ್ಘಾಟನೆಗೊಳ್ಳಲಿದೆ.

ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಹಾಪ್‌ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ಎ. ರಮೇಶ್ ಚಂಗಪ್ಪ ಈ ಬಗ್ಗೆ ಮಾಹಿತಿ ನೀಡಿದರು. ಅಂದು ಬೆಳಿಗ್ಗೆ ೧೧ ಗಂಟೆಗೆ ಕಟ್ಟಡವನ್ನು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ರಮೇಶ್ ಚಂಗಪ್ಪ ವಹಿಸಲಿದ್ದು, ತೋಟಗಾರಿಕಾ ಸಚಿವ ಮುನಿರತ್ನ ಅವರು ಪಾಲ್ಗೊಳ್ಳಲಿದ್ದಾರೆ. ಹಾಪ್‌ಕಾಮ್ಸ್ ಸಂಸ್ಕರಣ ಘಟಕವನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದು, ಹಾಪ್‌ಕಾಮ್ಸ್ ಸಂಗ್ರಹಣಾ ಕೇಂದ್ರವನ್ನು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮವನ್ನು ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳದ ಅಧ್ಯಕ್ಷ ಡಾ. ಬಿ.ಡಿ. ಭೂಕಾಂತ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್‌ಸಿಂಹ, ವಿಧಾನಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿಕುಶಾಲಪ್ಪ, ಮಾಜಿ ಸಚಿವ ಯಂ.ಸಿ. ನಾಣಯ್ಯ, ತೋಟಗಾರಿಕಾ ನಿರ್ದೇಶಕರಾದ ಕೆ. ನಾಗೇಂದ್ರ ಪ್ರಸಾದ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ರಮೇಶ್ ಚಂಗಪ್ಪ ವಿವರಿಸಿದರು.

ಗೋಷ್ಠಿಯಲ್ಲಿ ಹಾಪ್‌ಕಾಮ್ಸ್ ಉಪಾಧ್ಯಕ್ಷ ಮಲ್ಲಂಡ ಮಧು ದೇವಯ್ಯ, ನಿರ್ದೇಶಕರುಗಳಾದ ಎಸ್.ಪಿ. ಪೊನ್ನಪ್ಪ, ಕೋಣೇರಿರ ಎಂ. ಮನೋಹರ್, ಎಂ.ಡಿ. ಸುವಿನ್ ಗಣಪತಿ ಉಪಸ್ಥಿತರಿದ್ದರು.