ಮಡಿಕೇರಿ, ಅ. ೧೧: ವಾಟೆಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಅಧ್ಯಕ್ಷತೆಯನ್ನು ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮ ವಹಿಸಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಎಸ್.ಡಿ.ಎಂ.ಸಿ. ಸದಸ್ಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಡಿಕೇರಿ ವಲಯ ಅರಣ್ಯಾಧಿಕಾರಿಗಳಾದ ಮಯೂರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಇಕೋ ಕ್ಲಬ್‌ನ ಮಾರ್ಗದರ್ಶಿ ಶಿಕ್ಷಕಿಯಾದ ಬಿ.ಜಿ. ಸೌಮ್ಯ ಅವರು ಆಯೋಜಿಸಿದ್ದರು.