ಕೂಡಿಗೆ, ಅ. ೧೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರಿನ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನವರಾತ್ರಿ ಪೂಜೆಯ ಅಂಗವಾಗಿ ಚಂಡಿಕಾ ಹೋಮ ನಡೆಯಿತು.
ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ, ಉಪಾಧ್ಯಕ್ಷ ಎನ್.ಎಸ್. ಮುತ್ತಪ್ಪ, ಕಾರ್ಯದರ್ಶಿ ಬಿ.ಎಲ್. ಸುರೇಶ್ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.