ಮಡಿಕೇರಿ, ಅ. ೧೩: ಭಾರಿ ಬೆಲೆ ಬಾಳುವ ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿರುವುದಾಗಿ ತಿಳಿದುಬಂದಿದೆ. ಸುಗಂಧ ದ್ರವ್ಯ, ಔಷಧಿ ತಯಾರಿಕೆಯಲ್ಲಿ ಬಳಸಲಾಗುವ ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿತರಾಗಿರುವುದಾಗಿ ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದ್ದು ಪೂರ್ಣ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.