ಕಡAಗ, ಅ. ೧೩: ಕಡಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಸಭಾಂಗಣದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೋಡಿರ ತಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಅಧ್ಯಕ್ಷರು ಮಾತನಾಡಿ ಸಂಘ ಅರಪಟ್ಟು, ಪೊದವಾಡ ಮತ್ತು ಕರಡ ಗ್ರಾಮದ ಕಾರ್ಯವ್ಯಾಪ್ತಿ ಹೊಂದಿದ್ದು, ಪ್ರಸ್ತುತ ವರ್ಷದಲ್ಲಿ ೧೧೯೧ ಸದಸ್ಯರಿದ್ದು ರೂ. ೬೯.೦೩ ಲಕ್ಷ ಬಂಡವಾಳ ಸಂಗ್ರಹಿಸಲಾಗಿದೆ.

೨೦೨೦-೨೧ರಲ್ಲಿ ರೂ. ೬.೩೭ ಕೋಟಿ ವಹಿವಾಟು ನಡೆಸಿ ರೂ. ೨೪.೭೮ ಲಕ್ಷ ಲಾಭಗಳಿಸಿದೆ ಎಂದು ಮಾಹಿತಿ ನೀಡಿದರು. ಸಂಘ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಅಧ್ಯಕ್ಷರು ತಿಳಿಸಿದರು. ಸಮಾರಂಭದಲ್ಲಿ ಸಂಘದಿAದ ಕಡಂಗ ಪಟ್ಟಣದಲ್ಲಿ ೨೭ ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿದ ಡಾ. ಪುಲಿಯಂಡ ಅಯ್ಯಪ್ಪ ಅವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಆಡಳಿತ ಮಂಡಳಿಯವರು, ಸಂಘದ ಸಿಬ್ಬಂದಿಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿದ್ದರು.