ವೀರಾಜಪೇಟೆ, ಅ. ೧೩: ಪ್ರತಿಯೊಬ್ಬರಿಗೂ ಕಾನೂನು ಕಾಯ್ದೆಗಳ ಅರಿವು ಅನಿವಾರ್ಯ ವಾಗಿದೆ ಎಂದು ವೀರಾಜಪೇಟೆಯ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಕೋನಪ್ಪ ಅಭಿಪ್ರಾಯಪಟ್ಟರು.

ಸಮೀಪದ ಬೇಟೋಳಿ ಗ್ರಾಮ ಪಂಚಾಯಿತಿಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ತಾ.ಪಂ. ಹಾಗೂ ವೀರಾಜಪೇಟೆಯ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತ ನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಬಿ.ಆರ್.ಪಿ ಗೀತಾಂಜಲಿ ಅವರು ಮಾತನಾಡಿ ಅಂರ‍್ರಾಷ್ಟಿçÃಯ ಹೆಣ್ಣುಮಕ್ಕಳ ದಿನಾಚರಣೆಯ ಮಹತ್ವ ಹಾಗೂ ಹೆಣ್ಣು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸರಕಾರ ಕೈಗೊಂಡಿರುವ ಯೋಜನೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು. ಸಭೆಯನ್ನು ಉದ್ದೇಶಿಸಿ ವಕೀಲೆ ರೆಹನಾ ಅವರು ಮಾತನಾ ಡಿದರು. ಬೇಟೋಳಿ ಪಂಚಾಯಿತಿ ಅಧ್ಯಕ್ಷೆ ಯಶೋಧ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಿಆರ್‌ಪಿ ವೆಂಕಟೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಣಿ, ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕ್ರಮ ಮತ್ತಿತರರು ಇದ್ದರು.