ಮಡಿಕೇರಿ, ಅ. ೧೩: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಸ್ವಾತಂತ್ರö್ಯ ಅಮೃತ ಮಹೋತ್ಸವ ಪ್ರಯುಕ್ತ ಕಾರ್ಮಿಕರಿಗೆ ಇರುವ ಕಾನೂನು, ಅಸಂಘಟಿತ ವಲಯದ ಹಕ್ಕುಗಳು ಮತ್ತು ವಲಸೆ ಕಾರ್ಮಿಕರಿಗೆ ಸಂಬAಧಿಸಿದAತೆ ಕುಂದುಕೊರತೆ ಕುರಿತು ಕಾನೂನು ಅರಿವು ಕಾರ್ಯಾಗಾರ ನಡೆಯಿತು.

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಮಣಿ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕಾರ್ಮಿಕರಿಗೆ ಹಲವು ಕಾನೂನುಗಳಿದ್ದು, ಅವುಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.

ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಇ-ಶ್ರಮ ಯೋಜನೆಯಡಿ ಗುರುತಿನ ಚೀಟಿ ಪಡೆಯುವುದು. ಖಾಸಗಿ ವಾಣಿಜ್ಯ ವಾಹನ ಚಾಲಕರಿಗೆ ಪರಿಹಾರ ಯೋಜನೆ, ಪ್ರಧಾನಮಂತ್ರಿ ಮಾನ್‌ಧನ್ ಯೋಜನೆ, ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕ ಕುಟುಂಬದ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ, ಹಾಗೆಯೇ ಅಸಂಘಟಿತ ಕಾರ್ಮಿಕರಿಗೆ ಟೂಲ್‌ಕಿಟ್ ವಿತರಣೆ, ಪಿಂಚಣಿ, ಶಸ್ತç ಚಿಕಿತ್ಸೆಗೆ ಧನಸಹಾಯ, ಒಳ ರೋಗಿಗಳಿಗೆ ಚಿಕಿತ್ಸೆಗಾಗಿ ಸೌಲಭ್ಯಗಳು ಇವೆ ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ಕಾರ್ಮಿಕ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕಾರ್ಮಿಕ ಅಧಿಕಾರಿ ಎಂ.ಎA. ಯತ್ನಟಿ ಇತರರು ಇದ್ದರು.