ಕುಶಾಲನಗರ, ಅ. ೧೩: ಕುಶಾಲನಗರ ವಿವಿಧ ಕಾಮಗಾರಿಗಳಲ್ಲಿ ಹೆಚ್ಚಿದ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಕುಶಾಲನಗರ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಪ್ರಸಕ್ತ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಕೆಲಸವಾಗಬೇಕೆಂದು ಸದಸ್ಯರುಗಳು ಅಧ್ಯಕ್ಷರನ್ನು ಆಗ್ರಹಿಸಿದರು.

ಪಟ್ಟಣದ ಟೆಂಡರ್ ಕಾಮಗಾರಿ ಸಂದರ್ಭ ಅಧಿಕಾರಿಗಳು ಹೆಚ್ಚಿನ ಮೊತ್ತದ ಕಮಿಷನ್ ಪಡೆಯುತ್ತಿರುವ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಕಾಮಗಾರಿ ನಡೆಸಲು ಹಿಂದೇಟು ಹಾಕುವಂತಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿಯ ನಾಮನಿರ್ದೇಶಿತ ಸದಸ್ಯ ಎಂ.ವಿ. ನಾರಾಯಣ್ ಸಭೆಯ ಗಮನಕ್ಕೆ ತಂದರು. ಇದರ ಪರಿಣಾಮವಾಗಿ ಬಹುತೇಕ ಕಾಮಗಾರಿಗಳು ಕಳಪೆ ಗುಣಮಟ್ಟ ಆಗುತ್ತಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿ ಸ್ಥಳೀಯ ಗುತ್ತಿಗೆದಾರರು ಪಾಲ್ಗೊಳ್ಳುತ್ತಿಲ್ಲ ಎಂದು ಮಾಹಿತಿ ನೀಡಿದರು. ಈ ಎಲ್ಲ ಕಾರಣಗಳಿಂದ ಕುಶಾಲನಗರದ ಪಟ್ಟಣದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ ಈ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸುವ ಭರವಸೆ ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸದಸ್ಯರು ವಿದ್ಯುತ್ ಸಮಸ್ಯೆ, ಬಡಾವಣೆಗಳಲ್ಲಿ ಅಸಮರ್ಪಕ ಕಾಮಗಾರಿ, ಬಡಾವಣೆ ನಿರ್ಮಾಣ ಸಂದರ್ಭ ಸಮರ್ಪಕ ದಾಖಲೆಗಳ ಪರಿಶೀಲನೆ ಕುಶಾಲನಗರ, ಅ. ೧೩: ಕುಶಾಲನಗರ ವಿವಿಧ ಕಾಮಗಾರಿಗಳಲ್ಲಿ ಹೆಚ್ಚಿದ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಕುಶಾಲನಗರ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಪ್ರಸಕ್ತ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಕೆಲಸವಾಗಬೇಕೆಂದು ಸದಸ್ಯರುಗಳು ಅಧ್ಯಕ್ಷರನ್ನು ಆಗ್ರಹಿಸಿದರು.

ಪಟ್ಟಣದ ಟೆಂಡರ್ ಕಾಮಗಾರಿ ಸಂದರ್ಭ ಅಧಿಕಾರಿಗಳು ಹೆಚ್ಚಿನ ಮೊತ್ತದ ಕಮಿಷನ್ ಪಡೆಯುತ್ತಿರುವ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಕಾಮಗಾರಿ ನಡೆಸಲು ಹಿಂದೇಟು ಹಾಕುವಂತಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿಯ ನಾಮನಿರ್ದೇಶಿತ ಸದಸ್ಯ ಎಂ.ವಿ. ನಾರಾಯಣ್ ಸಭೆಯ ಗಮನಕ್ಕೆ ತಂದರು. ಇದರ ಪರಿಣಾಮವಾಗಿ ಬಹುತೇಕ ಕಾಮಗಾರಿಗಳು ಕಳಪೆ ಗುಣಮಟ್ಟ ಆಗುತ್ತಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿ ಸ್ಥಳೀಯ ಗುತ್ತಿಗೆದಾರರು ಪಾಲ್ಗೊಳ್ಳುತ್ತಿಲ್ಲ ಎಂದು ಮಾಹಿತಿ ನೀಡಿದರು. ಈ ಎಲ್ಲ ಕಾರಣಗಳಿಂದ ಕುಶಾಲನಗರದ ಪಟ್ಟಣದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ ಈ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸುವ ಭರವಸೆ ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸದಸ್ಯರು ವಿದ್ಯುತ್ ಸಮಸ್ಯೆ, ಬಡಾವಣೆಗಳಲ್ಲಿ ಅಸಮರ್ಪಕ ಕಾಮಗಾರಿ, ಬಡಾವಣೆ ನಿರ್ಮಾಣ ಸಂದರ್ಭ ಸಮರ್ಪಕ ದಾಖಲೆಗಳ ಪರಿಶೀಲನೆ

ಸೇರಿದಂತೆ ರಾಷ್ಟಿçÃಯ ಹೆದ್ದಾರಿ ರಸ್ತೆಯ ಎರಡೂ ಕಡೆ ಅಗತ್ಯ ಮೂಲ ಸೌಲಭ್ಯಗಳಿಗೆ ರಸ್ತೆ ಮಧ್ಯದಿಂದ ೨೧ಮೀ ಅಂತರ ಸ್ಥಳ ಕಾಯ್ದಿರಿಸುವುದು ಈ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಪಟ್ಟಣದ ಗುಂಡೂರಾವ್ ಬಡಾವಣೆ ಅಭಿವೃದ್ಧಿ, ಸ್ವಂತ ಕಟ್ಟಡಗಳ ಇಲ್ಲದ ಅಂಗನವಾಡಿಗಳಿಗೆ ಜಾಗ ನೀಡುವ ಬಗ್ಗೆ, ಪಂಚಾಯಿತಿಗೆ ಸಂಬAಧಿಸಿದAತೆ ನ್ಯಾಯಾಲಯ ದಲ್ಲಿರುವ ಮೊಕದ್ದಮೆಗಳ ಬಗ್ಗೆ ಚರ್ಚೆ ನಡೆದವು. ಹಿಂದಿನ ಸಭೆಯ ನಡಾವಳಿಗಳನ್ನು ಓದಿ ಅಂಗೀಕರಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಪಟ್ಟಣ ಪಂಚಾಯಿತಿಯಲ್ಲಿ ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಸರಕಾರದ ಗಮನಕ್ಕೆ ತಂದು ಸಿಬ್ಬಂದಿಗಳ ನೇಮಕಗೊಳಿಸುವಂತೆ ಸದಸ್ಯರು ಒತ್ತಾಯಿಸಿದರು. ಪಂಚಾಯಿತಿ ಎಂಜಿನಿಯರ್ ಕಾರ್ಯವೈಖರಿ ಬಗ್ಗೆ ಬಹುತೇಕ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಪಟ್ಟಣದ ವ್ಯಾಪ್ತಿಯಲ್ಲಿ ಯಾವುದೇ ಮಂದಿರ ಅಥವಾ ಪ್ರಾರ್ಥನಾ ಸ್ಥಳಗಳನ್ನು ಕೆಡವುವ ಬಗ್ಗೆ ಸದಸ್ಯರಾದ ಪ್ರಮೋದ್ ಮುತ್ತಪ್ಪ ಸಭೆಯ ಗಮನಕ್ಕೆ ತಂದಾಗ ಯಾವುದೇ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ಬಗ್ಗೆ ಸೂಚನೆಗಳು ಬಂದಿಲ್ಲ ಎಂದು ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಸ್ಪಷ್ಟನೆ ನೀಡಿದರು.

ಕೊರೊನಾ ವಾರಿಯರ್ಸ್ಗಳನ್ನು ಇದೇ ಸಂದರ್ಭ ಸನ್ಮಾನಿಸಿ, ಗೌರವಿಸಲಾಯಿತು.

ಪಂಚಾಯಿತಿ ಅಧ್ಯಕ್ಷ ಜಯವರ್ಧನ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷೆ ಸುರಯ್ಯಾ ಬಾನು, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ. ಸುರೇಶ್, ಸದಸ್ಯರಾದ ಶೇಖ್ ಕಲೀಮುಲ್ಲಾ, ಪುಟ್ಟಲಕ್ಷಿö್ಮ, ಡಿ.ಕೆ. ತಿಮ್ಮಪ್ಪ, ರೂಪ ಉಮಾಶಂಕರ್, ಅಮೃತ್ ರಾಜ್, ವಿ.ಎಸ್. ಆನಂದಕುಮಾರ್, ಜಯಲಕ್ಷಿö್ಮ ಜಯಲಕ್ಷö್ಮಮ್ಮ, ಶೈಲಾ ಕೃಷ್ಣಪ್ಪ, ಸುಂದರೇಶ್, ಕೆ.ಆರ್. ರೇಣುಕಾ, ಬಿ.ಎಲ್. ಜಗದೀಶ್, ಕೆ.ಜಿ. ಮನು ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್, ಕಾನೂನು ಸಲಹೆಗಾರ ಆರ್.ಕೆ. ನಾಗೇಂದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.