ಕೂಡಿಗೆ, ಅ. ೧೩: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಮಡಿಕೇರಿ ಇವರ ವತಿಯಿಂದ ವರ್ಷಂಪ್ರತಿ ವಾರ್ಷಿಕ ಮಹಾ ಸಭೆಯಲ್ಲಿ ನೀಡುವ ತಾಲೂಕು ಮಟ್ಟದ ೨೦೨೦-೨೧ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪಡೆದಿದೆ.
ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘವನ್ನು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ತಾಲೂಕು ಮಟ್ಟದಲ್ಲಿ ಉನ್ನತ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಿದವರನ್ನು ಗುರುತಿಸಿ ಪ್ರಥಮ ಸ್ಥಾನವನ್ನು ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅವರಿಗೆ ಪ್ರಶಸ್ತಿ ಪತ್ರ, ನಗದು ಪುರಸ್ಕಾರವನ್ನು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರು ನೀಡಿದರು.