ಮಡಿಕೇರಿ, ಅ. ೧೨: ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖಾ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ.೩೧ ಕೊನೆಯ ದಿನವಾಗಿದೆ. ೨೦೨೧-೨೨ ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್ನಲ್ಲಿ ಶೇ.೬೦ ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ಅರ್ಜಿ ನಮೂನೆ, ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ ಪ್ರಮಾಣ ಪತ್ರ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು. ಅಕ್ಟೋಬರ್, ೩೧ ರ ನಂತರ ಸಲ್ಲಿಸುವ ಅರ್ಜಿ ಸ್ವೀಕರಿಸಲಾಗುವುದಿಲ್ಲ.
ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ:-೦೮೨೭೨-೨೨೫೫೩೧, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ದೂ.ಸಂ.೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ದೂ.ಸಂ:-೦೮೨೭೬-೨೮೧೧೧೫, ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ದೂ.ಸಂ:-೦೮೨೭೪-೨೪೯೪೭೬ ಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಅವರು ತಿಳಿಸಿದ್ದಾರೆ.