ಗೋಣಿಕೊಪ್ಪಲು, ಅ. ೧೩: ಭಾರತೀಯ ಜನತಾ ಪಾರ್ಟಿಯ ವಿವಿಧ ಮೋರ್ಚಾಗಳು ಶಕ್ತಿಯುತವಾಗಿ ಬೆಳೆಯುತ್ತಿದೆ ಎಂದು ವೀರಾಜಪೇಟೆ ಬಿಜೆಪಿ ಮಂಡಲದ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಹೇಳಿದರು.

ಗೋಣಿಕೊಪ್ಪಲುವಿನ ಪ್ರಕಾಶ್ ಇಂಟರ್ ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ವೀರಾಜಪೇಟೆ ತಾಲೂಕು ಬಿಜೆಪಿ ಒಬಿಸಿ ಘಟಕದ ಅಧ್ಯಕ್ಷ ಕೆ. ರಾಜೇಶ್ ಅಧ್ಯಕ್ಷತೆಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷ ಕಾಲಕಾಲಕ್ಕೆ ನೀಡುವ ಸೂಚನೆಗಳನ್ನು ಒಬಿಸಿ ಘಟಕ ಚಾಚೂ ತಪ್ಪದೆ ಪಾಲಿಸುತ್ತಿದೆ. ಇದರಿಂದ ಸಂಘಟನೆ ಬಲಿಷ್ಟವಾಗಿದೆ ಎಂದರು.

ಓಬಿಸಿ ಮೋರ್ಚಾದ ಜಿಲ್ಲಾ ಪ್ರಭಾರಿ ವಿಠಲ್ ಪೂಜಾರಿ ಮಾತನಾಡಿ, ದೇಶದ ಪ್ರಧಾನಿಯವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಗೊಳಿಸಿ ಅಧಿಕಾರ ಪಡೆಯಬೇಕೆಂದರು.

ಓಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಬಿ.ವೈ. ಆನಂದ್ ರಘು, ಪ್ರಧಾನ ಕಾರ್ಯದರ್ಶಿ ಬಿ.ಎಂ. ಗಣೇಶ್, ಜಿಲ್ಲಾ ಉಪಾಧ್ಯಕ್ಷ ವಿ.ಕೆ. ಲೋಕೇಶ್, ತಾಲೂಕು ಕಾರ್ಯದರ್ಶಿ ನವೀನ್ ಉತ್ತಯ್ಯ, ವಿನೋದ್ ಪೂಜಾರಿ ಸೇರಿದಂತೆ ಇನ್ನಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಓಬಿಸಿ ಮೋರ್ಚಾದ ತಾಲೂಕು ಉಪಾಧ್ಯಕ್ಷ ಬಿ.ಎನ್. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸುಮಿ ಸುಬ್ಬಯ್ಯ ಪ್ರಾರ್ಥಿಸಿದರು.